Home » Udupi: ಚರ್ಚ್‌ನಲ್ಲಿ ಪ್ರಾರ್ಥನೆ ಮಾಡುತ್ತಿದ್ದಾಗ ಕುಸಿದು ಬಿದ್ದು ಮಹಿಳೆ ಸಾವು

Udupi: ಚರ್ಚ್‌ನಲ್ಲಿ ಪ್ರಾರ್ಥನೆ ಮಾಡುತ್ತಿದ್ದಾಗ ಕುಸಿದು ಬಿದ್ದು ಮಹಿಳೆ ಸಾವು

0 comments

Udupi: ಅಜ್ಜರಕಾಡಿನ ಮಹಿಳೆಯೊಬ್ಬರು ಚರ್ಚ್‌ನಲ್ಲಿ ಪ್ರಾರ್ಥನೆ ಮಾಡುತ್ತಿದ್ದಾಗ ಕುಸಿದು ಬಿದ್ದು ಮೃತಪಟ್ಟ ಘಟನೆ ಭಾನುವಾರ (ಮೇ 25) ನಡೆದಿದೆ.

ಮೃತರನ್ನು ಕುಂದಾಪುರ ಖಾರ್ವಿ ಕೆಳಕೇರಿ ನಿವಾಸಿ ಶಾಂತಿ (52) ಎಂದು ಗುರುತಿಸಲಾಗಿದೆ.

ರವಿವಾರ ಶಾಂತಿ ಅವರು ಅಜ್ಜರಕಾಡಿನ ಚರ್ಚ್‌ನಲ್ಲಿ ಬೆಳಿಗ್ಗೆ 11.15 ರಿಂದ 11.30 ಗಂಟೆಯ ಮಧ್ಯೆ ಪ್ರಾರ್ಥನೆ ಮಾಡುತ್ತಿರುವ ಸಂದರ್ಭದಲ್ಲಿ ಕುಸಿದಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋದರೂ ಆಗಲೇ ಮೃತ ಹೊಂದಿದ್ದಾರೆ ಎಂದು ವೈದ್ಯರು ಘೋಷಣೆ ಮಾಡಿದರು.

ಮಹಿಳೆ ಕಳೆದ ಐದು ವರ್ಷಗಳಿಂದ ಥೈರಾಡ್‌ ಮತ್ತು ಗರ್ಭಕೋಶ ಖಾಯಿಲೆಯಿಂದ ಬಳಲುತ್ತಿದ್ದರು. ಇದಕ್ಕೆ ಚಿಕಿತ್ಸೆ ಪಡೆಯುತ್ತಿದ್ದು, ಈ ಖಾಯಿಲೆ ಉಲ್ಭಣಗೊಂಡು ಮೃತಪಟ್ಟಿರಬಹುದು ಎಂದು ಶಂಕೆ ವ್ಯಕ್ತಪಡಿಸಿ ಪುತ್ರಿ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.

You may also like