Home » ತಾಯಿಯ ಬಾಯ್ ಫ್ರೆಂಡ್ ಜೊತೆ ಮಗಳ ಮದುವೆ ಮಾಡಿಸಿದ ತಾಯಿ | ಲೈಂಗಿಕ ಕ್ರಿಯೆಗೆ ಒತ್ತಾಯ!

ತಾಯಿಯ ಬಾಯ್ ಫ್ರೆಂಡ್ ಜೊತೆ ಮಗಳ ಮದುವೆ ಮಾಡಿಸಿದ ತಾಯಿ | ಲೈಂಗಿಕ ಕ್ರಿಯೆಗೆ ಒತ್ತಾಯ!

0 comments

ಮಕ್ಕಳು ತಪ್ಪು ದಾರಿಯಲ್ಲಿ ನಡೆದಾಗ ತಿದ್ದಿ ಬುದ್ಧಿ ಹೇಳುವುದು ವಾಡಿಕೆ. ಆದರೆ, ತಾಯಿಯೇ ಮಕ್ಕಳನ್ನು ಸನ್ಮಾರ್ಗದಲ್ಲಿ ನಡೆಯಲು ಪ್ರೇರೇಪಿಸುವ ಬದಲಿಗೆ, ತಪ್ಪು ಹಾದಿಯಲ್ಲಿ ಮುನ್ನಡೆಯಲು ಮಾರ್ಗದರ್ಶನ ನೀಡಿದರೆ, ಕೆಟ್ಟ ಮೇಲೆ ಬುದ್ದಿ ಬಂತು ಎಂಬ ಗಾದೆಯಂತೆ ಆದರೂ ಅಚ್ಚರಿಯಿಲ್ಲ.

ಮಹಾರಾಷ್ಟ್ರದ ಪುಣೆಯಲ್ಲಿ ಹೆತ್ತ ತಾಯಿಯೇ ತನ್ನ ಅಪ್ರಾಪ್ತ ಮಗಳನ್ನು ಆಕೆಯ ಪ್ರಿಯಕರನೊಂದಿಗೆ ಬಲವಂತವಾಗಿ ಮದುವೆ ಮಾಡಿಸಿ, ಲೈಂಗಿಕ ಸಂಬಂಧ ಹೊಂದುವಂತೆ ಒತ್ತಾಯಿಸಿರುವ ಅಚ್ಚರಿಯ ಘಟನೆ ಬೆಳಕಿಗೆ ಬಂದಿದೆ.

ಬಾಲಕಿ ಈ ವಿಷಾದನೀಯ ಸಂಗತಿಯನ್ನು ಸಹಪಾಠಿಯೊಬ್ಬರಿಗೆ ತಿಳಿಸಿದ್ದು, ಈ ಬಗ್ಗೆ ಮಹಿಳಾ ಸಾಮಾಜಿಕ ಕಾರ್ಯಕರ್ತೆಯೊಬ್ಬರಿಗೆ ಮಾಹಿತಿ ನೀಡಲಾಗಿದೆ. ಈ ಬಳಿಕ ಘಟನೆ ಬೆಳಕಿಗೆ ಬಂದಿದ್ದು, ಪ್ರಿಯಕರ ಮಹಿಳೆಯ ದೂರದ ಸಂಬಂಧಿಯಾಗಿದ್ದು, ಆಕೆಯೊಂದಿಗೆ ವಾಸವಾಗಿದ್ದ ಎನ್ನಲಾಗಿದೆ.

ಒಂದು ವೇಳೆ ಮದುವೆ ಮಾಡಿಕೊಳ್ಳಲು ಒಪ್ಪದಿದ್ದರೆ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬಾಲಕಿಗೆ ತಾಯಿ ಹೆದರಿಸಿದ್ದಾಳೆ. ಹೀಗಾಗಿ ನವೆಂಬರ್ 6 ರಂದು ಅಹ್ಮದ್‍ನಗರದ ದೇವಸ್ಥಾನದಲ್ಲಿ ತನ್ನ ಪ್ರಿಯಕರನೊಂದಿಗೆ ಮಹಿಳೆ ಮಗಳಿಗೆ ಮದುವೆ ಮಾಡಿಸಿದ್ದಾಳೆ. ಅಲ್ಲದೆ, ಆ ವ್ಯಕ್ತಿಯೊಂದಿಗೆ ಬಲವಂತವಾಗಿ ಲೈಂಗಿಕ ಸಂಬಂಧ ಬೆಳೆಸುವಂತೆ ಒತ್ತಾಯಿಸಿದ್ದಾಳೆ ಎನ್ನಲಾಗಿದೆ.

ಇದೀಗ 36 ವರ್ಷದ ಮಹಿಳೆ ಮತ್ತು ಆಕೆಯ 28 ವರ್ಷದ ಪ್ರಿಯಕರನನ್ನು ಬಂಧಿಸಲಾಗಿದ್ದು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಚಂದನನಗರ ಪೋಲಿಸ್ ಠಾಣೆಯ ಅಧಿಕಾರಿಗಳು ಈ ಸಂಬಂಧ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

You may also like

Leave a Comment