Home » Mangaluru: ಮೀನು ಕದ್ದ ಆರೋಪಕ್ಕೆ ಮರಕ್ಕೆ ಕಟ್ಟಿ ಮಹಿಳೆಗೆ ಥಳಿತ: ಅನಾಗರಿಕ ವರ್ತನೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ ಸಿಎಂ

Mangaluru: ಮೀನು ಕದ್ದ ಆರೋಪಕ್ಕೆ ಮರಕ್ಕೆ ಕಟ್ಟಿ ಮಹಿಳೆಗೆ ಥಳಿತ: ಅನಾಗರಿಕ ವರ್ತನೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ ಸಿಎಂ

by ಕಾವ್ಯ ವಾಣಿ
0 comments

Mangaluru: ಕೃಷ್ಣನಗರಿ (Mangaluru) ಉಡುಪಿ ತಾಲೂಕಿನ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿರುವ ಘಟನೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಈ ಕುರಿತು ಸೂಕ್ತ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

 

ಮಹಿಳೆಯೊಬ್ಬರನ್ನು ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ವಿಡಿಯೋ ನೋಡಿ ಗಾಬರಿ ಆಯ್ತು. ಕಾರಣವೇನೇ ಇರಲಿ ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಾಕಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧವೂ ಹೌದು. ಕಳ್ಳತನ, ಮೋಸ, ವಂಚನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್‌ ಇಲಾಖೆಯಿದ್ದು ದೂರು ದಾಖಲಿಸಿದರೆ ಅವರೇ ತನಿಖೆ ನಡೆಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲು ಸಮರ್ಥವಿರುವಾಗ ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳುವುದು ಸರ್ಕಾರ ಸಹಿಸುವುದಿಲ್ಲ. ಈ ಘಟನೆ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ತಿಳಿಸಿದ್ದಾರೆ.

You may also like