Home » Yashasvini Yojana : ಫಲಾನುಭವಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ!!!

Yashasvini Yojana : ಫಲಾನುಭವಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ!!!

0 comments

ಗ್ರಾಮೀಣ ಪ್ರದೇಶದ ಸಹಕಾರಿ ಸಂಘಗಳ ಸದಸ್ಯರಿಗೆ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸುತ್ತಿದ್ದು, ಹೊಸ ಸದಸ್ಯರ ನೋಂದಣಿ ಪ್ರಕ್ರಿಯೆ ಈಗಾಗಲೇ ಪ್ರಾರಂಭಿಸಿದೆ.

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಯಶಸ್ವಿನಿ ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಒಂದು ಕುಟುಂಬಕ್ಕೆ 5 ಲಕ್ಷ ರೂ. ವರೆಗಿನ ವೆಚ್ಚದಲ್ಲಿ ನಗದು ರಹಿತ ಚಿಕಿತ್ಸೆ ಪಡೆಯಬಹುದು. ಮತ್ತು ರಾಜ್ಯ ಸರ್ಕಾರವು ಯೋಜನೆಯಡಿ ಆಯವ್ಯಯದಲ್ಲಿ 300 ಕೋಟಿ ರೂ. ಅನುದಾನ ನಿಗದಿ ಪಡಿಸಿದೆ ಎಂದು ಮಾಹಿತಿ ನೀಡಿದೆ.

ಸಹಕಾರ ಇಲಾಖೆಯು 2022-23 ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸುತ್ತಿದ್ದು, ಜೊತೆಗೆ ಹೊಸ ಸದಸ್ಯರ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಿದೆ. ನವೆಂಬರ್ 14 ರ ರೊಳಗಾಗಿ ಅರ್ಹರು ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಸಹಕಾರ ಸಂಘಗಳ ಉಪನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಮುಖವಾಗಿ ಗ್ರಾಮೀಣ ಪ್ರದೇಶದ ಸಹಕಾರಿ ಸಂಘಗಳ ಸದಸ್ಯರಿಗೆ ನಾಲ್ಕು ಜನರ ಕುಟುಂಬಕ್ಕೆ ತಲಾ 500 ರೂ. ಹಾಗೂ ನಗರ ಪ್ರದೇಶದ ಸಹಕಾರಿಗಳಿಗೆ 1000 ರೂ. ವಂತಿಗೆ ನಿಗದಿ ಪಡಿಸಲಾಗಿದೆ. ನಾಲ್ಕು ಮಂದಿಗಿಂತ ಹೆಚ್ಚಿನ ಸದಸ್ಯರು ಇರುವ ಕುಟುಂಬ ಗಳಿಗೆ ಹೆಚ್ಚುವರಿ ಸದಸ್ಯರಿಗೆ ತಲಾ 200 ರೂ. ವಂತಿಗೆ ಪಾವತಿಸಿ, ನೊಂದಾಯಿಸಬಹುದು ಎಂದು ಸೂಚಿಸಲಾಗಿದೆ.

You may also like

Leave a Comment