Home » Vijayapura: ಪಕ್ಷದಿಂದ ಯತ್ನಾಳ್ ಉಚ್ಚಾಟನೆ – ಬಿಜೆಪಿಯಲ್ಲಿ ಶುರುವಾಯಿತು ಬೆಂಬಲಿಗರ ರಾಜೀನಾಮೆ ಪರ್ವ!!

Vijayapura: ಪಕ್ಷದಿಂದ ಯತ್ನಾಳ್ ಉಚ್ಚಾಟನೆ – ಬಿಜೆಪಿಯಲ್ಲಿ ಶುರುವಾಯಿತು ಬೆಂಬಲಿಗರ ರಾಜೀನಾಮೆ ಪರ್ವ!!

0 comments

Vijayapura : ಬಿಎಸ್ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಾ ಬಂದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಅವಧಿಗೆ ಉಚ್ಚಾಟನೆ ಮಾಡಲಾಗಿದೆ. ಈ ಬೆನ್ನಲ್ಲೇ ಬಿಜೆಪಿಯಲ್ಲಿ ಯತ್ನಾಳ್ ಬೆಂಬಲಿಗರ ರಾಜೀನಾಮೆ ಪರ್ವ ಶುರುವಾಗಿದೆ.

ಹೌದು, ಬಿಜಿಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಉಚ್ಚಾಟನೆ ಬೆನ್ನಲ್ಲೇ ವಿಜಯಪುರ (Vijayapura) ಜಿಲ್ಲಾ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಶುರುವಾಗಿದೆ. ಜಿಲ್ಲಾ ಬಿಜೆಪಿ ನಗರ ಮಂಡಲ ಅಧ್ಯಕ್ಷ ಸೇರಿದಂತೆ ಅನೇಕ ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ. ಯತ್ನಾಳ್ ಅವರ ಉಚ್ಛಾಟನೆಗೆ ವಿಜಯಪುರ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ ಪಕ್ಷವನ್ನೇ ತೊರೆಯುವ ನಿರ್ಧಾರ ಮಾಡಿದ್ದಾರೆ.

ಇಷ್ಟೇ ಅಲ್ಲದೆ ರೈತ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಲಾಗಿದೆ. ರೈತ ಮೋರ್ಚಾ ಅಧ್ಯಕ್ಷ ರಾಚು ಬಿರಾದಾರ್, ನಗರ ಮಂಡಲ ಅಧ್ಯಕ್ಷ ಶಂಕರ್ ಹೂಗಾರ್ ಎಂಬುವವರು I STAND WITH ಯತ್ನಾಳ್ ಎಂದು ಬರೆದು ರಾಜೀನಾಮೆ ನೀಡಿದ್ದಾರೆ. ಯತ್ನಾಳ್ ರಾಜೀನಾಮೆ ಬಳಿಕ ಒಟ್ಟು ಐವರು ರಾಜೀನಾಮೆ ನೀಡಿದ್ದಾರೆ. ಇದು ಇನ್ನು ಮುಂದುವರಿಯುವ ಸಾಧ್ಯತೆ ಇದೆ.

You may also like