3
Yatnal: ಬಿಜೆಪಿ ನಾಯಕ, ಹಿಂದೂ ಫೈಯರ್ ಬ್ರಾಂಡ್ ಬಸವನಗೌಡ ಪಾಟೀಲ್ ಅವರು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆಗೊಂಡಿದ್ದಾರೆ. ಇದನ್ನಲೇ ರಾಜ್ಯ ರಾಜಕೀಯದಲ್ಲಿ ಹಲವು ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಒಂದೆಡೆ ಬಿಜೆಪಿಯ ರೆಬಲ್ಸ್ ನಾಯಕರು ಸಭೆ ಸೇರಿ ಯತ್ನಾಳ್ ಗೆ ಬೆಂಬಲ ನೀಡಿದರೆ ಮತ್ತೊಂದೆಡೆ ಕಾಂಗ್ರೆಸ್ ಶಾಸಕರು ಒಬ್ಬರು ಯತ್ನಾಳ್ ಅವರನ್ನು ಕಾಂಗ್ರೆಸ್ ಗೆ ಸೇರ್ಪಡೆ ಮಾಡಿಕೊಳ್ಳುವ ಕುರಿತು ಮಾತನಾಡಿದ್ದಾರೆ.
ಹೌದು, ಹೈಕಮಾಂಡ್ ಜೊತೆಗೆ ಚರ್ಚೆ ಮಾಡಿ ಕರೆದುಕೊಂಡು ಬನ್ನಿ ಅಂದ್ರೆ ಸ್ವಾಗತ ಮಾಡ್ತೀವಿ ಎಂದು ಕಾಂಗ್ರೆಸ್ ಹಿರಿಯ ಶಾಸಕ ರಾಜು ಕಾಗೆ ಹೇಳಿದ್ದಾರೆ. ಈ ಕುರಿತು ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಾನೇ ಬಸನಗೌಡ ಪಾಟೀಲ್ ಯತ್ನಾಳರನ್ನು ಕಾಂಗ್ರೆಸ್‌ಗೆ ಕರೆದುಕೊಂಡು ಬರುತ್ತೇನೆ, ನನಗೆ ಜಾವಾಬ್ದಾರಿ ಕೊಟ್ಟರೆ ಕರೆದುಕೊಂಡು ಬರುತ್ತೇನೆ. ಹೈಕಮಾಂಡ್ ಜೊತೆಗೆ ಚರ್ಚೆ ಮಾಡಿ ಕರೆದುಕೊಂಡು ಬನ್ನಿ ಅಂದ್ರೆ ಸ್ವಾಗತ ಮಾಡ್ತೀವಿ ಎಂದು ರಾಜು ಕಾಗೆ ಅವರು ಹೇಳಿದರು.
