4
ಬೈಂದೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರಿಗೆ ಗಂಭೀರ ಗಾಯಗಳಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂಡದಲ್ಲಿ ನಡೆದಿದೆ.
ಇಂದು ಮಧ್ಯಾಹ್ನದ ವೇಳೆಯಲ್ಲಿ ಉಡುಪಿಯಿಂದ ಭಟ್ಕಳಕ್ಕೆ ಹೋಗುತ್ತಿದ್ದ ಬಸ್ಸಿಗೆ, ಹಿಂದಿನಿಂದ ಶಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಚಾಲಕನಿಗೆ ಗಂಭೀರ ಗಾಯವಾಗಿದ್ದು. ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ.
ಗಾಯಳುಗಳನ್ನು ಆಸ್ಬತ್ರೆ ಗೆ ದಾಖಲಿಸಿದ್ದು, ಸ್ಥಳಕ್ಕೆ ಬೈಂದೂರು ಠಾಣೆಯ ಪಿ ಎಸ್ಐ ಪವನ್ ನಾಯಕ್ ಭೇಟಿ ನೀಡಿದ್ದು, ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ.
