Home » ಉಡುಪಿ: ಒಂದೂವರೆ ವರ್ಷಗಳ ಹಿಂದೆ ಅಂತ್ಯಕ್ರಿಯೆಯಾದ ವ್ಯಕ್ತಿಯ ಶವ ಹೊರತೆಗೆಯುವ ಪ್ರಕ್ರಿಯೆ!! ಸಾವಿನ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿರುವ ಕಾರಣವೇನು!??

ಉಡುಪಿ: ಒಂದೂವರೆ ವರ್ಷಗಳ ಹಿಂದೆ ಅಂತ್ಯಕ್ರಿಯೆಯಾದ ವ್ಯಕ್ತಿಯ ಶವ ಹೊರತೆಗೆಯುವ ಪ್ರಕ್ರಿಯೆ!! ಸಾವಿನ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿರುವ ಕಾರಣವೇನು!??

0 comments

ಮಲ್ಪೆ: ಇಲ್ಲಿನ ಬೀಡಿನಗುಡ್ಡೆಯ ರುದ್ರಭೂಮಿಯಲ್ಲಿ ಕಳೆದ ಒಂದೂವರೆ ವರ್ಷಗಳ ಹಿಂದೆ ದಫನ ಮಾಡಲಾದ ಪಂಜಾಬ್ ಮೂಲದ ವ್ಯಕ್ತಿಯೊಬ್ಬರ ಮೃತದೇಹವನ್ನು ಹೆಚ್ಚಿನ ತನಿಖೆಗಾಗಿ ಇಂದು ಹೊರತೆಗೆಯುತ್ತಿರುವ ಬಗ್ಗೆ ವರದಿಯಾಗಿದೆ.

ಪಂಜಾಬ್ ನಿಂದ ನಾಪತ್ತೆಯಾಗಿದ್ದ ವ್ಯಕ್ತಿಯು ಕಳೆದ ಒಂದೂವರೆ ವರ್ಷಗಳ ಹಿಂದೆ ಉಡುಪಿಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೃತಪಟ್ಟಿದ್ದರು.ಈ ಸಂದರ್ಭದಲ್ಲಿ ವಾರೀಸುದಾರರು ಪತ್ತೆಯಾಗದ ಹಿನ್ನೆಲೆಯಲ್ಲಿ ಅಜ್ಜರಕಾಡು ಶವಾಗಾರದಲ್ಲಿ ಇರಿಸಲಾಗಿದ್ದ ಮೃತದೇಹವನ್ನು ಕಾನೂನು ಪ್ರಕ್ರಿಯೆ ಮುಗಿದ ಬಳಿಕ ಬೀಡಿನಗುಡ್ಡೆಯ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು.

ಈ ಕುರಿತು ಮಾಹಿತಿ ಪಡೆದ ಪಂಜಾಬ್ ಪೊಲೀಸರು ಹೆಚ್ಚಿನ ತನಿಖೆಗಾಗಿ ಮೃತದೇಹವನ್ನು ಹೊರತೆಗೆಯಬೇಕೆಂದು ಮನವಿ ಸಲ್ಲಿಸಿದ್ದು, ಅದರಂತೆ ಇಂದು ಪಂಜಾಬ್ ಪೊಲೀಸರ ಸಮ್ಮುಖದಲ್ಲಿ ಉಡುಪಿ ತಹಶೀಲ್ದಾರ್ ಸಹಿತ ಪೊಲೀಸ್ ಅಧಿಕಾರಿಗಳ ಉಪಸ್ಥಿತಿಯಲ್ಲಿ ಮೃತದೇಹ ಹೊರತೆಗೆಯುವ ಪ್ರಕ್ರಿಯೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

You may also like

Leave a Comment