14
Udupi: ರಾಜ್ಯ ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶ ಹಾಗೂ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಆದೇಶದ ಅನ್ವಯ, ಅವೈಜ್ಞಾನಿಕ ಬೆಳಕು ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.ಜಿಲ್ಲೆಯ ಮೀನುಗಾರರು ಬೆಳಕು ಮೀನುಗಾರಿಕೆಗಾಗಿ ದೋಣಿಗಳಲ್ಲಿ ಜನರೇಟರ್ ಗಳನ್ನು ಯಾವುದೇ ಕಾರಣಕ್ಕೂ ಬಳಸುವಂತಿಲ್ಲ ಹಾಗೂ ಬೆಳಕು ಮೀನುಗಾರಿಕೆ ನಡೆಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
