9
Udupi murder case update : ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಎಸ್.ಪಿ.ಡಾ.ಅರುಣ್ ಅವರು ಈ ಪ್ರಕರಣಕ್ಕೆ(Udupi murder case update )ಸಂಬಂಧಪಟ್ಟಂತೆ ಹಲವಾರು ಆಯಾಮದಲ್ಲಿ ತನಿಖೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಸಂಜೆಯೊಳಗೆ ತನಿಖೆ ಮಾಡಿ ಪೂರ್ಣ ಚಿತ್ರಣ ಸಿಗಲಿದೆ ಎಂದು ಹೇಳಿದ್ದಾರೆ.
ಆರೋಪಿ ಪ್ರವೀಣ್ ಚೌಗುಲೆ ಅವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದೇವೆ, ಟೆಕ್ನಿಕಲ್ ಮತ್ತು ಹ್ಯೂಮನ್ ಇಂಟೆಲಿಜೆನ್ಸ್ ಮೇರೆಗೆ ಕೆರೆದುಕೊಂಡು ಬಂದು ವಿಚಾರಣೆ ನಡೆಸುತ್ತಿದ್ದೇವೆ, ಸಂಜೆಯೊಳಗೆ ತನಿಖೆ ಮಾಡಿ ಪೂರ್ಣ ಚಿತ್ರಣ ಸಿಗಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಉಡುಪಿ: ನೇಜಾರು 15 ನಿಮಿಷದಲ್ಲಿ ನಾಲ್ವರ ಕೊಲೆ ಮಾಡಿದ ಆರೋಪಿ ಬಂಧನ : ಕೊಲೆಗೆ ಇದೇ ಕಾರಣವೇ ?
ಉಡುಪಿ ಜಿಲ್ಲೆ ಮತ್ತು ಬೆಳಗಾವಿ ಜಿಲ್ಲೆಯ ಪೊಲೀಸರ ಸಹಕಾರದಿಂದ ಪ್ರವೀಣ್ ಅರುಣ್ ಚೌಗಲೆಯನ್ನು ವಶಕ್ಕೆ ಪಡೆಯಲಾಗಿದ್ದು, ಹಲವಾರು ಶಂಕಿತರ ವಿಚಾರಣೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.
