Home » Udupi: ಉಡುಪಿ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ

Udupi: ಉಡುಪಿ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ

1 comment

Udupi: ಇಲ್ಲಿನ ದೊಡ್ಡಣ್ಣಗುಡ್ಡೆ ಬಬ್ಬುಸ್ವಾಮಿ ಗುಡಿಯ ಬಳಿ ಇರುವ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಳ್ಳಂಬೆಳಗ್ಗೆ ಅಗ್ನಿಅವಘಡ ಸಂಭವಿಸಿದ್ದು, ಕಟ್ಟಡ ನವೀಕರಣ ಕೆಲಸ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ.

ಅಗ್ನಿ ಅವಘಡ ಸಂದರ್ಭದಲ್ಲಿ ರೋಗಿಗಳು ಯಾರೂ ಇರಲಿಲ್ಲ. ಅಡುಗೆ ಕೋಣೆಯಲ್ಲಿ ಬೆಳಗ್ಗೆ ಕೆಲಸ ಪ್ರಾರಂಭಿಸುವಾಗ ಹಾಲ್‌ನಲ್ಲಿ ಶಬ್ದ ಕೇಳಿ ಬಂದಿದ್ದು, ಹೊರಗೆ ಬಂದು ನೋಡಿದಾಗ ಬೆಂಕಿ ಹತ್ತಿಕೊಂಡಿತ್ತು ಎಂದು ವರದಿಯಾಗಿದೆ.

ವೈದ್ಯರಿಗೆ, ಅಗ್ನಿಶಾಮಕ ದಳದವರಿಗೆ ಕೂಡಲೇ ಫೋನ್‌ ಮೂಲಕ ತಿಳಿಸಲಾಗಿದ್ದು, ಮೊದಲ ಫ್ಲೋರ್‌ನಲ್ಲಿ ಇಬ್ಬರು ಕೆಲಸದವರು ಉಳಿದಿಕೊಂಡಿದ್ದು, ನಂತರ ಅವರು ಹೊರಗೆ ಬಂದಿದ್ದಾರೆ. ಅಗ್ನಿ ಅವಘಡ ಸಂಭವಿಸಲು ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ಕಾರಣ ಎಂದು ಹೇಳಲಾಗಿದ್ದು, ಎರಡು ಫೈರ್‌ ಎಂಜಿನ್‌ಗಳನ್ನು ಬಳಸಿ ಬೆಂಕಿ ನಂದಿಸುವ ಕೆಲಸ ನಡೆಯುತ್ತಿದೆ. ಬೆಂಕಿ ತಹಬದಿಗೆ ಬಂದಿದೆ.

You may also like

Leave a Comment