Home » ಉಡುಪಿ | ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯಕಾರಣಿ ಸದಸ್ಯೆ ಆತ್ಮಹತ್ಯೆಗೆ ಶರಣು

ಉಡುಪಿ | ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯಕಾರಣಿ ಸದಸ್ಯೆ ಆತ್ಮಹತ್ಯೆಗೆ ಶರಣು

0 comments

ಉಡುಪಿ: ಮಹಿಳೆಯೊಬ್ಬರು ವೈಯಕ್ತಿಕ ಕಾರಣದಿಂದ ಬೇಸತ್ತು ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಕ್ಕಿಕಟ್ಟೆ ಎಂಬಲ್ಲಿ ನಡೆದಿದೆ.

ಸೆ.14ರ ಮಂಗಳವಾರ ಈ ಘಟನೆ ನಡೆದಿದ್ದು,ಮೃತರನ್ನು ಕುಕ್ಕಿಕಟ್ಟೆ ನಿವಾಸಿ ಆಶಾ ಶೆಟ್ಟಿ (48) ಎಂದು
ಗುರುತಿಸಲಾಗಿದೆ.

ಮೃತರು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸದಸ್ಯೆ, ಹಾಗೂ ತುಳು ಕೂಟ, ಭಜನಾ ಮಂಡಳಿ,ಚಂಡೆ ಬಳಗದಲ್ಲಿ ಸಕ್ರಿಯರಾಗಿದ್ದರು.

ಇವರು ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದು ಇಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಪತ್ರದಲ್ಲಿ ನೇತ್ರದಾನ ಮಾಡುವಂತೆ ಹಾಗೂ ಇನ್ನಿತರ ವಿಷಯಗಳನ್ನು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಘಟನೆಗೆ ಸಂಬಂಧಿಸಿದಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like

Leave a Comment