Home » Kaapu: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಸಾವು !! ಪ್ರಕರಣ ದಾಖಲು

Kaapu: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಸಾವು !! ಪ್ರಕರಣ ದಾಖಲು

0 comments

Kaapu : ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾಪುವಿ(Kaapu)ನಲ್ಲಿ ನಡೆದಿದೆ.

ಮಣಿಪುರ ನಿವಾಸಿ ಕರುಣಾಕರ್‌ ಅವರ ಪುತ್ರಿ ಕೀರ್ತನಾ (26) ಮೃತ ಯುವತಿ. ಸಹಕಾರಿ ಸಂಘದಲ್ಲಿ ಸುಮಾರು ಮೂರು ವರ್ಷಗಳಿಂದ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಕೀರ್ತನಾ, ಕೆಲವು ಸಮಯಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು. ನ. 10ರಂದು ಬೆಳಗ್ಗೆ 10.30 ಗಂಟೆಗೆ ಮನೆಯಲ್ಲಿಯೇ ತನ್ನ ರೂಮಿನ ಮೆಲ್ಭಾಗದ ಪಕ್ಕಾಸಿಗೆ ಚೂಡಿದಾರದ ಶಾಲನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡಿದ್ದು, ಇದನ್ನು ಗಮನಿಸಿದ ಹೆತ್ತವರು ಸ್ಥಳೀಯರ ಸಹಕಾರದೊಂದಿಗೆ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ ಅವರು ನ. 17ರಂದು ಮೃತಪಟ್ಟಿದ್ದು, ಈ ಬಗ್ಗೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like

Leave a Comment