Home » ಬೆಂಗಳೂರಿನಲ್ಲಿ ಸ್ಕೂಟರ್ಗೆ ಕ್ಯಾಂಟರ್ ಡಿಕ್ಕಿ ಹೊಡೆದು ಯುವತಿ ಸಾವು

ಬೆಂಗಳೂರಿನಲ್ಲಿ ಸ್ಕೂಟರ್ಗೆ ಕ್ಯಾಂಟರ್ ಡಿಕ್ಕಿ ಹೊಡೆದು ಯುವತಿ ಸಾವು

0 comments

ಬೆಂಗಳೂರಿನಲ್ಲಿ ಸ್ಕೂಟರ್ ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಯುವತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.

ಬೆಂಗಳೂರಿನ ಕುರುಬರ ಪಾಳ್ಯದ ನಿವಾಸಿ ಗಂಗಾ ಮೃತಪಟ್ಟ ಯುವತಿ.

ಗಂಗಾ ಗಗನಸಖಿ ಕೆಲಸಕ್ಕಾಗಿ ಸಂದರ್ಶನಕ್ಕೆ ಹೋಗುತ್ತಿದ್ದಾಗ ಅವರ ಸ್ಕೂಟರ್ ಗೆ ಕ್ಯಾಂಟರ್ ಡಿಕ್ಕಿ ಹೊಡೆದು ತಲೆಯ ಮೇಲೆ ಹರಿದ ಪರಿಣಾಮವಾಗಿ ಸ್ಥಳದಲ್ಲಿ ಮೃತ ಪಟ್ಟಿದ್ದಾರೆ.

ಗಂಗ ಗಗನಸಖಿ ಯಾಗಬೇಕೆಂದು ತುಂಬಾ ಕನಸು ಇಟ್ಟುಕೊಂಡಿದ್ದರು. ಆದ್ದರಿಂದ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರೆದಿದ್ದ ಸಂದರ್ಶನಕ್ಕೆ ಹೋಗುತ್ತಿದ್ದಾಗ ಮಾರ್ಗಮಧ್ಯೆ ಭದ್ರಪ್ಪ ಲೇಯೌಟ್ ಮೇಲ್ಸೇತುವೆ ಬಳಿ ಹಿಂದಿನಿಂದ ವೇಗವಾಗಿ ಬಂದ ಕ್ಯಾಂಟರ್ ಸ್ಕೂಟರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ತಲೆಗೆ ಗಂಭೀರವಾದ ಗಾಯವಾಗಿದ್ದರಿಂದ ಗಂಗಾ ಸ್ಥಳದಲ್ಲಿ ಮೃತಪಟ್ಟಿದ್ದಾರೆ.

You may also like

Leave a Comment