Bengaluru : ಸಿಲಿಕಾನ್ ಸಿಟಿ ಬೆಂಗಳೂರಿನ (ಬೆಂಗಳೂರು) ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಕಾರ್ಯಕ್ರಮ ಮುಗಿದ ಬೆನ್ನಲ್ಲೆ ಕ್ರೀಡಾಂಗಣದ ಬಳಿ 15 ಟನ್ ತ್ಯಾಜ್ಯ ಸಂಗ್ರಹವಾಗಿದೆ ಎಂದು ವರದಿಯಾಗಿದೆ.
ಕರ್ನಾಟಕ ವಿಧಾನ ಸಭೆ ಚುನಾವಣೆಯೂ ಮೇ.10ರಂದು ನಡೆಯಿತು. ಚುನಾವಣಾ ಫಲಿತಾಂಶವೂ ಮೇ.13ಕ್ಕೆ ನಡೆದಿದ್ದು, ಭಾರೀ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಬಳಿಕ ಮೇ.20ರಂದು ಅದ್ದೂರಿಯಾಗಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸುವ ಕಾರ್ಯಕ್ರಮ ನಡೆಯಲಾಯಿತು. ಕಾರ್ಯಕ್ರಮಕ್ಕೆ ರಾಜ್ಯದ ಬಹುತೇಕ ಜಿಲ್ಲೆಗಳ ನಾಯಕರು ಮುಖಂಡರು, ಕಾರ್ಯಕರ್ತರು ಸೇರಿದಂತೆ 1.2 ಲಕ್ಷ ಜನರು ಆಗಮಿಸಿದ್ದರು.
ಕಾರ್ಯಕ್ರಮಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಲಾಗಿತ್ತು. ಅಲ್ಲದೇ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಕ್ರೀಡಾಂಗಣದಲ್ಲಿ ಕಸದ ರಾಶಿಯೇ ನಿರ್ಮಾಣವಾಗಿದ್ದು, ಪೇಪರ್ ಲೋಟ, ಬಾಟಲಿಗಳು, ಮಜ್ಜಿಗೆ ಪ್ಯಾಕೆಟ್ಗಳು ಹೆಚ್ಚಾಗಿ ಕಂಡು ಬಂದಿದ್ದವು . ಕಸ ನಿರ್ವಹಣೆ ಮಾಡಲು ಬಿಬಿಎಂಪಿ ಮುಂದಾಗಿದ್ದು, ಬಿಬಿಎಂಬಿ ಅಧಿಕಾರಿಗಳ ನೇತೃತ್ವದಲ್ಲಿ ಸ್ವಚ್ಚತಾ ಕಾರ್ಯಕ್ರಮದಲ್ಲಿ ತೊಡಗಿದ್ದು ಬರೊಬ್ಬರಿ 15 ಟನ್ ಕಸ ಸಂಗ್ರಹವಾಗಿತ್ತು ಎಂದು ಬಿಬಿಎಂಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:Clothes Tip: ಬಟ್ಟೆ ಮೇಲಿನ ಕಲೆಯನ್ನು ಹೋಗಲಾಡಿಸಲು ಇಲ್ಲಿದೆ ಸಿಂಪಲ್ ಟಿಪ್ಸ್
