Home » By Election : ರಾಜ್ಯದ ಮೂರು ಕ್ಷೇತ್ರದ ಉಪಚುನಾವಣೆಗಳಲ್ಲೂ ಕಾಂಗ್ರೆಸ್ ಗೆ ಭರ್ಜರಿ ಗೆಲುವು?

By Election : ರಾಜ್ಯದ ಮೂರು ಕ್ಷೇತ್ರದ ಉಪಚುನಾವಣೆಗಳಲ್ಲೂ ಕಾಂಗ್ರೆಸ್ ಗೆ ಭರ್ಜರಿ ಗೆಲುವು?

0 comments

By Election : ರಾಜ್ಯದಲ್ಲಿ ಪ್ರತಿಷ್ಠೆಯಾಗಿರುವ ಮೂರು ಕ್ಷೇತ್ರಗಳ ಉಪಚುನಾವಣಾ(By Election ) ಫಲಿತಾಂಶ ಇಂದು ಹೊರಬೀಳಲಿದೆ ಈಗಾಗಲೇ ಮತ ಎಣಿಕೆ ಆರಂಭವಾಗಿದ್ದು ಅಭ್ಯರ್ಥಿಗಳ ಮನದಲ್ಲಿ ಡವಡವ ಶುರುವಾಗಿದೆ. ಈ ಬೆನ್ನಲ್ಲೇ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಬಾರಿಸಲಿದೆ ಎಂದು ಹೇಳಲಾಗಿದೆ. ಆದರೆ ಈ ರೀತಿ ಹೇಳಿದ್ದು ಯಾವುದೇ ಚುನಾವಣೋತ್ತರಸಮೀಕ್ಷೆಗಳೆಲ್ಲ. ಬದಲಿಗೆ ಕಾಂಗ್ರೆಸ್ ನಾಯಕ ಹಾಗೂ ರಾಜ್ಯದ ಉಪ ಮುಖ್ಯಮಂತ್ರಿ ಆದ ಡಿಕೆ ಶಿವಕುಮಾರ್(DK Shivkumar ) ಅವರು.

ಹೌದು, ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಚುನಾವಣೋತ್ತರವಾಗಿ ನಡೆದಿರುವ ಮೂರು ಸಮೀಕ್ಷೆಗಳ ಫಲಿತಾಂಶ ಉಲ್ಟಾ ಆಗಲಿದೆ. ಆ ಸಮೀಕ್ಷೆ ಸುಳ್ಳಾಗಲಿದೆ. ರಾಜ್ಯ ವಿಧಾನಸಭೆ ಚುನಾವಣೆ, ಹರ್ಯಾಣ ವಿಧಾನಸಭೆ ಚುನಾವಣೆಗಳಲ್ಲಿ ಸಮೀಕ್ಷೆ ಸುಳ್ಳಾಗಿವೆ. ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ಹೇಳಿದರು.

ಅಲ್ಲದೆ ಚನ್ನಪಟ್ಟಣದಲ್ಲಿ ನಾನೇ ಅಭ್ಯರ್ಥಿ ಅಂತ ಹೇಳಿದ್ದೆ. ಗೆದ್ದರೂ ನಾನು ಗೆದ್ದಂತೆ, ಸೋತರೂ ನಾನು ಸೋತಂತೆ. ಯೋಗೇಶ್ವರ್ ಗೆ ಟಿಕೆಟ್ ಕೊಟ್ಟಿದ್ದೇ ನಾನು. ನನ್ನ ಮುಖ ಇಟ್ಟುಕೊಂಡೆ ಚುನಾವಣೆ ಮಾಡಿದ್ದೇನೆ. ನಾನು ಘೋಷಣೆ ಮಾಡಿದ ನಂತರ ಕುಮಾರಸ್ವಾಮಿ ಅವರು ಕೂಡ ನಾನು ಅಭ್ಯರ್ಥಿ ಎಂದು ಹೇಳಿಕೊಂಡಿದ್ದರು. ಚನ್ನಪಟ್ಟಣದಲ್ಲಿ ಗೆಲ್ಲುವ ವಿಶ್ವಾಸದಲ್ಲಿ ನಾವಿದ್ದೇವೆ ಎಂದರು.

You may also like

Leave a Comment