Auto drivers :ಆಟೋ ಚಾಲಕರಿಗೆ (Auto drivers) ಮಹತ್ವದ ಮಾಹಿತಿ ಇದಾಗಿದ್ದು, ಮುಂದಿನ ಚುನಾವಣೆ ದಿನಾಂಕ ಫಿಕ್ಸ್ ಆದ ಬೆನ್ನಲ್ಲೆ ನೀತಿ ಸಂಹಿತೆ ಜಾರಿಯಾಗಿದ್ದು, ಈ ನಿಟ್ಟಿನಲ್ಲಿ ಆಟೋ ಮೇಲೆ ರಾಜಕೀಯ ನಾಯಕರ ಭಾವಚಿತ್ರ, ಚಿಹ್ನೆ ಇರುವ ಚಾಲಕರಿಗೆ ಆರ್ ಟಿ ಓ ಅಧಿಕಾರಿಗಳಿಂದ ಫೈನ್ ಬೀಳುವುದು ಗ್ಯಾರಂಟಿಯಾಗಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಟೋ ಮೇಲೆ ರಾಜಕೀಯ ನಾಯಕರ ಭಾವಚಿತ್ರ, ಚಿಹ್ನೆ ಇರುವ ಆಟೋ ಚಾಲಕರಿಗೆ ಆರ್ ಟಿ ಓ ಅಧಿಕಾರಿಗಳು ದಂಡ ವಿಧಿಸುತ್ತಿದ್ದಾರೆ.
ಬೆಂಗಳೂರಿನ ಸಂಗೊಳ್ಲಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಆರ್ ಟಿಒ ಅಧಿಕಾರಿಗಳು ದಾಳಿ ನಡೆಸಿದ್ದು, ಆಟೋ ಮೇಲೆ ರಾಜಕೀಯ ಪ್ರೇರಿತ ಫೋಟೋ, ಚಿಹ್ನೆ ಇದ್ದರೆ 5,000 ರೂ. ದಂಡ ವಿಧಿಸಲಾಗುತ್ತಿದೆ. ಜೆಡಿಎಸ್ ಪರ ಪ್ರಚಾರ ಮಾಡುವ ಕವರ್ ಅಂಟಿಸಿದ್ದ ಆಟೋ ಚಾಲಕನಿಗೆ ಆರ್ ಟಿಓ ಅಧಿಕಾರಿಗಳು 5,000 ರೂ. ದಂಡ ವಿಧಿಸಿದ್ದಾರೆ.
ಕರ್ನಾಟಕ ವಿಧಾನಸಭೆ ಚುಹಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು, ಆಟೋಗಳ ಮೇಲೆ ರಾಜಕೀಯ ಪಕ್ಷಗಳ ಚಿಹ್ನೆ ಹಾಕಿದ್ರೆ ದಂಡ ವಿಧಿಸಲು ಮುಂದಾಗಿದ್ದಾರೆ. ಈಗಾಗಲೇ ಆರ್ ಟಿಒ ಅಧಿಕಾರಿಗಳು ಪರ್ಮಿಟ್ ಉಲ್ಲಂಘನೆ ಕೇಸ್ ದಾಖಲು ಮಾಡುತ್ತಿದ್ದಾರೆ. ಕೇಸ್ ಹಾಕಿ 2 ಸಾವಿರ ರೂ. ದಂಡ ವಿಧಿಸುತ್ತಿದ್ದಾರೆ.
