Home » ಬಿಜೆಪಿಯ ಮತ್ತೊಂದು ವಿಕೆಟ್ ಪತನ; ಕಾಂಗ್ರೆಸ್ ಸೇರಿದ ಮಾಜಿ ಸಿಎಂ ಯಡಿಯೂರಪ್ಪ ಆಪ್ತ!

ಬಿಜೆಪಿಯ ಮತ್ತೊಂದು ವಿಕೆಟ್ ಪತನ; ಕಾಂಗ್ರೆಸ್ ಸೇರಿದ ಮಾಜಿ ಸಿಎಂ ಯಡಿಯೂರಪ್ಪ ಆಪ್ತ!

0 comments

Mohan limbikai :ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಜೋರಾಗಿದ್ದು, ಇದೀಗ ಬಿಜೆಪಿ ಮತ್ತೊಂದು ವಿಕೆಟ್ ಪತನವಾಗಿದೆ.ಬಿಜೆಪಿಯನ್ನು ಸೋಲಿಸಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಪ್ತ ಬಿಜೆಪಿ ನಾಯಕರನ್ನು ಸೆಳೆಯುವುದು ಕಾಂಗ್ರೆಸ್ ಅಳವಡಿಸಿಕೊಂಡ ಇತ್ತೀಚಿನ ತಂತ್ರವಾಗಿದೆ.

ವಿಧಾನಪರಿಷತ್ ಮಾಜಿ ಸದಸ್ಯ, ಹಿರಿಯ ವಕೀಲ ಮೋಹನ್ ಲಿಂಬಿಕಾಯಿ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಇಂದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.
ಮಾಜಿ ಎಂಎಲ್ಸಿ ಮೋಹನ್ ಲಿಂಬಿಕಾಯಿ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿರುವುದು. ಇತ್ತೀಚೆಗೆ ಲಿಂಬಿಕಾಯಿ ಕಾಂಗ್ರೆಸ್‌ ಸೇರ್ಪಡೆಯಾಗಿದ್ದು, ಬೆಳಗಾವಿಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಸ್ವಾಗತಿಸಿದ್ದರು.

ಲಿಂಬಿಕಾಯಿ(Mohan limbikai) ಅವರು ಬಿಜೆಪಿ ನಾಯಕ ಬಿಎಸ್ವೈಗೆ ಬಹಳ ಆಪ್ತರು ಎಂದು ಪರಿಗಣಿಸಲಾಗಿದೆ. ಧಾರವಾಡದಿಂದ ಬಿಜೆಪಿ ಶಾಸಕ ಅರವಿಂದ ಬೆಲ್ಲದ ವಿರುದ್ಧ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ. ಅರವಿಂದ ಬೆಲ್ಲದ್ ಅವರು ಯಡಿಯೂರಪ್ಪ ವಿರೋಧಿ ಶಾಸಕ ಎಂದೇ ಖ್ಯಾತರಾಗಿದ್ದಾರೆ.

ಬೆಳಗಾವಿಯ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ, ವಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಬಿಜೆಪಿಯ ಮುಖಂಡ ಮೋಹನ್ ಲಿಂಬಿಕಾಯಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.

ಕಾಂಗ್ರೆಸ್ ಬಾವುಟ ನೀಡಿ ಲಿಂಬಿಕಾಯಿ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಈ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್, ಬಿ.ಎಸ್.ಯಡಿಯೂರಪ್ಪನವರು ಸಿಎಂ ಆಗಿದ್ದಾಗ ಅವರ ಕಾನೂನು ಸಲಹೆಗಾರರಾಗಿದ್ದ ಮೋಹನ್ ಲಿಂಬಿಕಾಯಿ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈ ಹಿಂದೆ ಬಿಜೆಪಿಯಲ್ಲಿದ್ದ ಲಿಂಬಿಕಾಯಿ ಈಗ ಮಲ್ಲಿಕಾರ್ಜುನ ಖರ್ಗೆ ನಾಯಕತ್ವ ಮೆಚ್ಚಿ ನಮ್ಮ ಪಕ್ಷಕ್ಕೆ ಬಂದಿದ್ದಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡ ಬಳಿಕ ಮಾತನಾಡಿದಂತ ಮಾಜಿ ಪರಿಷತ್ ಸದಸ್ಯ ಮೋಹನ್ ಲಿಂಬಿಕಾಯಿ ಅವರು, ಬೇಷರತ್ ಆಗಿ ಕಾಂಗ್ರೆಸ್ ಪಕ್ಷ ಸೇರುತ್ತಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ನಾಯಕತ್ವ ಮೆಚ್ಚಿ ಕೈ ಪಕ್ಷವನ್ನು ಸೇರ್ಪಡೆಗೊಳ್ಳುತ್ತಿರೋದಾಗಿ ತಿಳಿಸಿದರು.

 

You may also like

Leave a Comment