Bangalore: ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತೀರಾ ಕಳಪೆ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಘಟಕಕ್ಕೆ ಮೇಜರ್ ಸರ್ಜರಿ ಮಾಡಲು ಹೈಕಮಾಂಡ್ ನಿರ್ಧರಿಸಿದೆ.
ಈ ಕುರಿತು ಬಲ್ಲಮೂಲಗಳ ಪ್ರಕಾರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮೈಸೂರು ಸಂಸದ ಪ್ರತಾಪ ಸಿಂಹ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ದಟ್ಟವಾಗಿದೆ.
ಉಳಿದಂತೆ ರಾಜ್ಯ ವಿಪಕ್ಷ ನಾಯಕನಾಗಿ ,ಮಾಜಿ ಕೇಂದ್ರ ಸಚಿವ ಬಸವನ ಗೌಡ ಪಾಟೀಲ್ ಯತ್ನಾಳ್ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಸಿ.ಟಿ.ರವಿ ಅವರ ಬದಲಿಗೆ ಆ ಸ್ಥಾನಕ್ಕೆ ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಅವರನ್ನು ನೇಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ರಾಜ್ಯ ವಿಧಾನಸಭಾ (Bangalore) ಚುನಾವಣೆಯ ಸೋಲಿನ ಪರಾಮರ್ಶೆ ನಡೆಸಿರುವ ಹೈಕಮಾಂಡ್ ಈ ಬದಲಾವಣೆ ಮಾಡಲು ಮುಂದಾಗಿದ್ದಾರೆ ಎಂದು ಕೇಳಿ ಬಂದಿದೆ.
ಇದನ್ನು ಓದಿ: Mangalore: ಸುಣ್ಣದ ಡಬ್ಬ ನುಂಗಿ ನರಳಾಡಿದ ನಾಗರ ಹಾವು!! ಶಸ್ತ್ರಚಿಕಿತ್ಸೆ ನಡೆಸಿ ಡಬ್ಬ ಹೊರತೆಗೆದ ಯುವ ವೈದ್ಯೆ ‘ಡಾ. ಯಶಸ್ವಿ’
