Home » ಬಸವರಾಜ ಬೊಮ್ಮಾಯಿ ಟೆಂಪಲ್ ರನ್: ಬಿಜೆಪಿ ಬಹುಮತದಿಂದ ಜಯಸಾಧಿಸಲಿದೆ ವಿಶ್ವಾಸ

ಬಸವರಾಜ ಬೊಮ್ಮಾಯಿ ಟೆಂಪಲ್ ರನ್: ಬಿಜೆಪಿ ಬಹುಮತದಿಂದ ಜಯಸಾಧಿಸಲಿದೆ ವಿಶ್ವಾಸ

0 comments

Basavaraj Bommai: ಹುಬ್ಬಳ್ಳಿ : ಇಂದು ಕರ್ನಾಟಕ ವಿಧಾನ ಸಭೆ ಚುನಾವಣಾ ಮತ ಎಣಿಕೆ ಹಿನ್ನೆಲೆ ಸಿಎಂ ಬೊಮ್ಮಾಯಿ ಬೆಳ್ಳಂಬೆಳಗ್ಗೆ ಟೆಂಪಲ್‌ ರನ್‌ ನಡೆಸಿದ್ದು ಈ ವೇಳೆ ಮತನಾಡಿ, ನಮ್ಮ ಬಿಜೆಪಿ ಸ್ಪಷ್ಟ ಬಹುಮತದಿಂದ ಜಯಸಾಧಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದಂತೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹುಬ್ಬಳ್ಳಿಯ ವಿಜಯನಗರದಲ್ಲಿರೋ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ವೀಶೇಷ ಸಲ್ಲಿಸಿದ್ದಾರೆ. ಶಿಗ್ಗಾಂವಿಗೆ ತೆರಳೋ‌ ಮುನ್ನ ಆಂಜನೇಯನ ದರ್ಶನ ಮಾಡಿದ್ದಾರೆ. ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಬಿಜೆಪಿ ಸ್ಪಷ್ಟ ಬಹುಮತದಿಂದ ಜಯಸಾಧಿಸಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಅಲ್ಲದೇ ಈ ಬಾರಿ ವಿಧಾನ ಸಭೆ ಚುನಾವಣೆಯೂ ಮೇ 10ರಂದು ಶಾಂತಿಯುತವಾಗಿ ನಡೆದಿದೆ. ಇಂದು ರಾಜ್ಯ ರಾಜಕೀಯದ ಭವಿಷ್ಯ ನಿರ್ಧಾರವಾಗಲಿದೆ. ರಾಜ್ಯ ಅಭಿವೃದ್ದಿಯ ದೃಷ್ಠಿಕೋನದಲ್ಲಿ ಹೆಚ್ಚಿ ಸಂಖ್ಯೆಯಲ್ಲಿ ಬಿಜೆಪಿ ಪಕ್ಷಕ್ಕೆ ಮತ ನೀಡಿದ್ದಾರೆ. ಭಾರೀ ಬಹುಮತದಿಂದ ಗೆಲ್ಲುವ ನಿರೀಕ್ಷೆಯನ್ನು ಹೊಂದಿದ್ದೇನೆ. ಮತದ ಏಣಿಕೆ ಸಂದರ್ಭದಲ್ಲೂ ಎಲ್ಲರೂ ಶಾಂತಿಯುತವಾಗಿ ಬೆಂಬಲ ಸೂಚಿಸಬೇಕೆಂದು ಮನವಿ ಮಾಡಿದ್ದಾರೆ.

You may also like

Leave a Comment