Home » ಬಿಜೆಪಿಯಲ್ಲಿರುವುದು ನನ್ನ ಪಾಲಿಗೆ ಹೆಮ್ಮೆಯ ವಿಷಯ : ಸಚಿವ ಕೆ ಗೋಪಾಲಯ್ಯ

ಬಿಜೆಪಿಯಲ್ಲಿರುವುದು ನನ್ನ ಪಾಲಿಗೆ ಹೆಮ್ಮೆಯ ವಿಷಯ : ಸಚಿವ ಕೆ ಗೋಪಾಲಯ್ಯ

0 comments

ಹಾಸನದ ಅಶೋಕ‌ ಹೋಟೆಲ್ ನಲ್ಲಿ ಇಂದು ಹಮ್ಮಿಕೊಂಡಿದ್ದ ಪಕ್ಷದ ರಾಜ್ಯ ಪ್ರಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ ಅಬಕಾರಿ ಮಂಡ್ಯ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ಅವರು, ಕಳೆದ ಎರಡೂವರೆ ವರ್ಷದಿಂದ ನಾನು ಬಿಜೆಪಿ ಸದಸ್ಯನಾಗಿ ಪಕ್ಷಕ್ಕಾಗಿ ದುಡಿಯುತ್ತಿರುವುದು ಹೆಮ್ಮೆಯ ವಿಚಾರ ಎಂದು ಸಂತಸದಿಂದ ಹೇಳಿಕೊಂಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದೇಶದ ಜನರ ಬದುಕು ಸಂಪೂರ್ಣವಾಗಿ ಬದಲಾಗಿದೆ. ಮಾತ್ರವಲ್ಲದೇ ಬಡತನ ನಿರ್ಮೂಲನೆ ಮತ್ತು ಹಸಿವು ಮುಕ್ತ ಭಾರತ ನಿರ್ಮಾಣದ ಕನಸು ಮುಂದಿನ‌ ಕೆಲ ದಿನಗಳಲ್ಲಿ ‌ಸಾಕಾರವಾಗಲಿದೆ ಎಂದರು.

ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ‌ಕಟೀಲ್ ಸಭೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಸ್ ವಿಜಯ್ ವರ್ಗಿ, ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್ ಜೀ, ಹಾಸನ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಕೆ.ಸುರೇಶ್ ಉಪಸ್ಥಿತರಿದ್ದರು. ರಾಜ್ಯದ ಎಲ್ಲ ಜಿಲ್ಲೆಗಳ ಪಕ್ಷದ ಪ್ರಮುಖರು ಭಾಗವಹಿಸಿದ್ದರು.

You may also like

Leave a Comment