Congress :”ಒಂದು ಗ್ರಾಮ ಪಂಚಾಯ್ತಿ ಗೆಲ್ಲಲಾಗದವರು ಇವತ್ತು ಬಿಜೆಪಿ ಕುಣಿಸುತ್ತಿದ್ದಾರೆ. ಬಿಜೆಪಿಯ ಅರ್ಥಶಾಸ್ತ್ರದ ಬೃಹಸ್ಪತಿಗಳು ದ್ರಾಕ್ಷಿ ಸಿಗದ ನರಿಯಂತಾಗಿದ್ದಾರೆ. ಒಂದು ಗ್ರಾಮ ಪಂಚಾಯ್ತಿ ಚುನಾವಣೆಗೆ ಕೂಡಾ ನಿಂತು ಗೆಲ್ಲಲಾಗದವರು ಇಡೀ ಬಿಜೆಪಿಯನ್ನು ಹಿಡಿತಕ್ಕೆ ಪಡೆದು ಕುಣಿಸುತ್ತಿದ್ದಾರೆ, ರೇಣುಕಾಚಾರ್ಯ ಅವರು ಹೇಳಿದ ಗ್ರಾ.ಪಂ ಚುನಾವಣೆಗೂ ನಿಲ್ಲಲಾಗದ ಆ ನಾಯಕ ಯಾರು? ” ಎಂದು ಕಾಂಗ್ರೆಸ್ (Congress)ಬಿಜೆಪಿಯನ್ನು ಲೇವಡಿ ಮಾಡಿ ಪ್ರಶ್ನಿಸಿದೆ.
ನಿನ್ನೆಯ ಟ್ವೀಟ್ ನಂತರ ಈಗ ಮತ್ತೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಪಕ್ಷವು ದಮ್ಮು ತಾಕತ್ತಿದ್ದರೆ ಬಿಜೆಪಿ ಆ ದೊಣ್ಣೆ ನಾಯಕನ ಹೆಸರು ಹೇಳಲಿ. ಬಿಜೆಪಿ ಈಗ ಆತ್ಮವಿಮರ್ಶೆ ಮಾಡಿಕೊಳ್ಳುತ್ತಿದೆಯೋ ಆತ್ಮಹತ್ಯೆ ವಿಮರ್ಶೆ ಮಾಡಿಕೊಳ್ಳುತ್ತಿದೆಯೇ ಎಂಬ ಅನುಮಾನ ಶುರುವಾಗಿದೆ -ಎಂದು ಛೇಡಿಸಿದೆ.
“ಮಾರಿ“ ಎಂದರೆ ಏನರ್ಥ @BJP4Karnataka?
ಮಹಿಳೆಯರನ್ನು ಘನತೆ, ಗೌರವದ ದೃಷ್ಟಿಯಲ್ಲಿ ನೋಡಲು ಬಿಜೆಪಿಗೆ ಸಾಧ್ಯವಿಲ್ಲವೇಕೆ?
ಮಹಿಳೆಯರನ್ನು “ಮಾರಿ” ಎನ್ನುವ ಮೂಲಕ ಬಿಜೆಪಿ ತನ್ನೊಳಗಿನ ವಿಷಕಾರಿ ಮನಸ್ಥಿತಿಯನ್ನು ಬಹಿರಂಗಪಡಿಸಿದೆ.
ಸ್ತ್ರೀಯರ ಗೌರವಕ್ಕೆ ಚ್ಯುತಿ ತಂದ
ಬಿಜೆಪಿ ನಾಡಿನ ಸಮಸ್ತ ಮಹಿಳೆಯರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಬೇಕು. pic.twitter.com/fBG3X322A9— Karnataka Congress (@INCKarnataka) June 29, 2023
‘ “ಮಾರಿ“ ಎಂದರೆ ಏನರ್ಥ ? ಮಹಿಳೆಯರನ್ನು ಘನತೆ, ಗೌರವದ ದೃಷ್ಟಿಯಲ್ಲಿ ನೋಡಲು ಬಿಜೆಪಿಗೆ ಸಾಧ್ಯವಿಲ್ಲವೇಕೆ?ಮಹಿಳೆಯರನ್ನು “ಮಾರಿ” ಎನ್ನುವ ಮೂಲಕ ಬಿಜೆಪಿ ತನ್ನೊಳಗಿನ ವಿಷಕಾರಿ ಮನಸ್ಥಿತಿಯನ್ನು ಬಹಿರಂಗಪಡಿಸಿದೆ. ಮಹಿಳೆಯರ ಗೌರವಕ್ಕೆ ಚ್ಯುತಿ ತಂದ ಬಿಜೆಪಿಯು ನಾಡಿನ ಸಮಸ್ತ ಸ್ತ್ರೀಯರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಬೇಕು ‘ ಎಂದು ಆಗ್ರಹಿಸಿದೆ.
ಬಿಜೆಪಿಯ ಸೋಲಿನ ಆತ್ಮವಲೋಕನದ ಫೈನಲ್ ರಿಸಲ್ಟ್ ಬರಲೇ ಇಲ್ಲ!
ಒಬ್ಬೊಬ್ಬರದ್ದೂ ಒಂದೊಂದು ಅವಲೋಕನ,
>ಅಧ್ಯಕ್ಷರಿಂದ ಸೋಲಾಯ್ತು
>ವಲಸಿಗರಿಂದ ಸೋಲಾಯ್ತು
>ಅಡ್ಜಸ್ಟ್ಮೆಂಟ್ ನಿಂದ ಸೋಲಾಯ್ತು
>ಬಡವರ ಅಕ್ಕಿ ಕಿತ್ತುಕೊಂಡು ಸೋಲಾಯ್ತು
>ಮೋದಿ ಬೀದಿ ಸುತ್ತಿದ್ದಕ್ಕೆ ಸೋಲಾಯ್ತು
>ಗುಜರಾತ್ ಮಾಡೆಲ್ ನಿಂದ ಸೋಲಾಯ್ತು
>ಪಕ್ಷದ್ರೋಹಿಗಳಿಂದ ಸೋಲಾಯ್ತು…— Karnataka Congress (@INCKarnataka) June 29, 2023
ಮುಂದುವರೆದು, ” ಬಿಜೆಪಿಯ ಸೋಲಿನ ಆತ್ಮಾವಲೋಕನದ ಫೈನಲ್ ರಿಸಲ್ಟ್ ಬರಲೇ ಇಲ್ಲ! ಒಬ್ಬೊಬ್ಬರದ್ದೂ ಒಂದೊಂದು ಅವಲೋಕನ :
ಅಧ್ಯಕ್ಷರಿಂದ ಸೋಲಾಯ್ತು,
ವಲಸಿಗರಿಂದ ಸೋಲಾಯ್ತು,
ಅಡ್ಜಸ್ಟ್ಮೆಂಟ್ ನಿಂದ ಸೋಲಾಯ್ತು
ಬಡವರ ಅಕ್ಕಿ ಕಿತ್ತುಕೊಂಡು ಸೋಲಾಯ್ತು
ಮೋದಿ ಬೀದಿ ಸುತ್ತಿದ್ದಕ್ಕೆ ಸೋಲಾಯ್ತು,
ಗುಜರಾತ್ ಮಾಡೆಲ್ ನಿಂದ ಸೋಲಾಯ್ತು
ಪಕ್ಷ ದ್ರೋಹಿಗಳಿಂದ ಸೋಲಾಯ್ತು” ಇದು ಈಗಿನ ಸ್ಥಿತಿ. ಒಂದು ವೇಳೆ ಅಕಸ್ಮಾತ್ ಗೆಲುವಾಗಿದ್ದಿದ್ದರೆ, ಕ್ರೆಡಿಟ್ ಸಿಂಪಲ್ ಆಗಿರುತ್ತಿದ್ದವು, ಮೋದಿಯಿಂದ ಗೆಲುವಾಯ್ತು, ಜೋಶಿ – ಸಂತೋಷರಿಂದ ಗೆಲುವಾಯ್ತು ಅನ್ನುತ್ತಿದ್ದರು. ಅಂತೂ ಇಂತೂ ಬಿಜೆಪಿಯ ಆತ್ಮಾವಲೋಕನವು ಹಲವು ಸತ್ಯಗಳನ್ನು ಹೊರಕ್ಕೆ ತಂದಿದೆ. ಇನ್ನೂ ಹಲವು ಹೊರಬಾರದೆ ಒದ್ದಾಡುತ್ತಿವೆ !” ಎಂದು ಕಾಂಗ್ರೆಸ್ ಕಿಚಾಯಿಸಿದೆ.
ಅನ್ನಭಾಗ್ಯದ ಅಕ್ಕಿ ಕಡಿತಗೊಳಿಸುವ
ಬಡವರ ಅನ್ನ ಕಿತ್ತುಕೊಂಡಿದ್ದಕ್ಕೆ ಸೋಲಾಗಿದೆ ಎಂದು ಪ್ರಾಮಾಣಿಕ ವಿಮರ್ಶೆ ಮಾಡಿಕೊಂಡಿದ್ದಾರೆ ಬಿಜೆಪಿಯ ರೇಣುಕಾಚಾರ್ಯ.@BSBommai ಅವರೇ,
ನಿಮ್ಮದೇ ಪಕ್ಷದ ರೇಣುಕಾಚಾರ್ಯರ ಈ ಮಾತುಗಳನ್ನು ಕೇಳಿ ತಾವು ತಲೆತಗ್ಗಿಸಿ ನಿಲ್ಲಬೇಕಿತ್ತು. ನಿಮಗೆ ಪಾಪಪ್ರಜ್ಞೆ ಕಾಡಬೇಕಿತ್ತು.ಅದು ಬಿಟ್ಟು ನಮ್ಮ ಅನ್ನಭಾಗ್ಯದ…
— Karnataka Congress (@INCKarnataka) June 29, 2023
” ರಾಜ್ಯಾಧ್ಯಕ್ಷ ನಳಿನ್ ರಿಂದ ಬಿಜೆಪಿಗೆ ಸೋಲಾಗಿದ್ದು ಎಂದು ರೇಣುಕಾಚಾರ್ಯ ಹೇಳಿದ್ದಾರೆ. ಕಟೀಲ್ ಅವರು ಈ ಆರೋಪ ಕೇಳಿಯೂ ಸುಮ್ಮನಿರುವುದೇಕೆ ? ಇದರಲ್ಲಿ ನನ್ನದೇನೂ ತಪ್ಪಿಲ್ಲ, ಶಾಡೋ ಅಧ್ಯಕ್ಷರಾದ ಜೋಶಿ, ಸಂತೋಷ್ ಅವರೇ ಸೋಲಿಗೆ ಹೊಣೆ ‘ ಎಂದು ಘೋಷಿಸಿಬಿಡಲಿ, ಆದ ಸೋಲಿಗೆ ಸರದಾರರಾದ ಜೋಶಿ, ಸಂತೋಷ್ ಅವರುಗಳ ಹೆಸರೆತ್ತಲು ಬಿಜೆಪಿಗರು ಭಯಪಾಡುತ್ತಿರುವುದೇಕೆ ? ” ಎಂದು ರಾಜ್ಯ ಕಾಂಗ್ರೆಸ್ ಪ್ರಶ್ನಿಸಿದೆ.
ಮೊದಲ ಬಾರಿಗೆ ಇತಿಹಾಸದಲ್ಲಿ ಆರೆಸಸ್ ಲಾಠಿ ಉಪಯೋಗಕ್ಕೆ ಬರಲಿದೆ. ಸದ್ಯದ ಬಿಜೆಪಿಯ ಸ್ಥಿತಿಯಲ್ಲಿ ಆ ಲಾಠಿಯನ್ನು ಬಿಜೆಪಿಗರ ಕೈಗೆ ಕೊಟ್ಟರೆ ಬಡಿದಾಡಿಕೊಳ್ಳಲು ಬಳಸುತ್ತಾರೆ. ಆ ಜಗಳದ, ಬಡಿದಾಟದ ನಂತರ ಉಳಿದ, ಬದುಕುಳಿದವರಿಗೆ ಅಧ್ಯಕ್ಷ, ವಿಪಕ್ಷ ನಾಯಕನ ಸ್ಥಾನ ಕೊಟ್ಟು ಕೂರಿಸಬಹುದು. ನಾವು ಬಿಜೆಪಿಯ ಗೊಂದಲ ಬಗೆಹರಿಸಲು ಉತ್ತಮ ಐಡಿಯಾವನ್ನು ಕಾಂಗ್ರೆಸ್ ಕಡೆಯಿಂದ ಫ್ರಿಯಾಗಿ ನೀಡುತ್ತಿದ್ದೇವೆ ” ಎಂದು ಕಾಂಗ್ರೆಸ್ ಪಕ್ಷ ನಿರಂತರ ಟ್ವೀಟ್ ಮಾಡಿ ಟಾಂಗ್ ನೀಡಿದೆ.
” ನಷ್ಟದ ಹಾದಿಯಲ್ಲಿದ್ದ ಸಾರಿಗೆ ಸಂಸ್ಥೆಗಳು ಈಗ ಲಾಭದ ದಾರಿಗೆ ಮರಳಿದ್ದು, ಪುರುಷ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಳವಾಗಿ ಸಾರಿಗೆ ಸಂಸ್ಥೆಗಳಿಗೆ ಹೆಚ್ಚಿನ ಆದಾಯ ಹರಿದುಬರುತ್ತಿದೆ. ಅವರ ಖಾಸಗೀಕರಣದ ಪ್ಲಾನಿಗೆ ನಷ್ಟದ ಕೂಪಕ್ಕೆ ಜಾರಿದ್ದ ಸಂಸ್ಥೆ ಈಗ ತಲೆ ಎತ್ತಿ ಬೀಗುತ್ತಿದೆ. ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗಳು ಮುಳುಗಿಯೇ ಬಿಡುತ್ತವೆ ಎಂದು ಬೊಬ್ಬೆ ಹೊಡೆಯುತ್ತಿದ್ದ ಬಿಜೆಪಿಯ ಅರ್ಥಶಾಸ್ತ್ರದ ಬೃಹಸ್ಪತಿಗಳು ಈಗ ದ್ರಾಕ್ಷಿ ಸಿಗದ ನರಿಯಂತೆ ಆಗಿದ್ದಾರೆ! ಎಂದು ಕಾಂಗ್ರೆಸ್ ಟೀಕಿಸಿದೆ.
ಇದನ್ನೂ ಓದಿ : ಸೌಜನ್ಯಾ ಗೌಡ ಅತ್ಯಾಚಾರ ಕೊಲೆ ಪ್ರಕರಣ ಜೈನರ ಸಪೋರ್ಟ್’ಗೆ ಸ್ವಜಾತಿ ಬಾಂಧವ ಕಾಂಗ್ರೆಸ್ ನಾಯಕ ಅಭಯಚಂದ್ರ ಜೈನ್ ಎಂಟ್ರಿ !
