Home » CM Siddaramiah : ಕನ್ನಡ ಪರ ಹೋರಾಟಗಾರರ ಮೇಲಿನ ಪ್ರಕರಣಗಳು ವಾಪಸ್ – ಸಿಎಂ ಸಿದ್ದರಾಮಯ್ಯ ಘೋಷಣೆ 

CM Siddaramiah : ಕನ್ನಡ ಪರ ಹೋರಾಟಗಾರರ ಮೇಲಿನ ಪ್ರಕರಣಗಳು ವಾಪಸ್ – ಸಿಎಂ ಸಿದ್ದರಾಮಯ್ಯ ಘೋಷಣೆ 

0 comments

CM Siddaramiah : ಕನ್ನಡ ಪರ ರಾಟಗಾರರ ಮೇಲಿನ ಪ್ರಕರಣ ವಾಪಸ್ ಪಡೆಯುವ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

ಭಾನುವಾರ ಕನ್ನಡ ಹೋರಾಟಗಾರರ ಸಮಿತಿಯಿಂದ ನಗರದ ಅರಮನೆ ಮೈದಾನದಲ್ಲಿ ನಡೆದ ‘ಜನರಾಜ್ಯೋತ್ಸವ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ ಅವರು ಕನ್ನಡ ಪರ ಹೋರಾಟಗಾರರ ಮೇಲಿನ ಪ್ರಕರಣ ವಾಪಸ್‌ ಪಡೆಯುವ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು. ಹಾಗೂ ಕನ್ನಡ ಶಾಲೆ ಉಳಿಸುವ ಬಗ್ಗೆ ತಜ್ಞರ ಸಭೆ ಕರೆದು ತೀರ್ಮಾನ ಕೈಗೊಳ್ಳುತ್ತೇವೆ ಎಂದೂ ತಿಳಿಸಿದ್ದಾರೆ.

ರಾಜ್ಯದ ನಾಡು, ನುಡಿ, ನೆಲ-ಜಲ ಹಾಗೂ ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ಸರ್ಕಾರ ರಾಜಿಯಾಗುವ ಪ್ರಶ್ನೆಯೇ ಇಲ್ಲ. ಕನ್ನಡಕ್ಕಾಗಿ, ನೆಲ- ಜಲಕ್ಕಾಗಿ ಹೋರಾಡಿದವರ ಮೇಲಿನ ಪ್ರಕರಣ ಸಾಕಷ್ಟಿವೆ. ಅವನ್ನು ಹಿಂಪಡೆಯುವ ಸಂಬಂಧ ಗೃಹಸಚಿವ ಪರಮೇಶ್ವರ್‌ ಅವರ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆಯಾಗಿದೆ. ಅದರ ಸಭೆಯನ್ನು ಶೀಘ್ರ ಕರೆದು ಪ್ರಕರಣ ವಾಪಸ್‌ ಪಡೆಯುವ ಕೆಲಸ ಮಾಡಲಾಗುವುದು ಎಂದು ಹೇಳಿದರು.

ಕನ್ನಡ ಮಾಧ್ಯಮದ ಶಾಲೆಗಳು ಉಳಿಯಬೇಕು, ಕನ್ನಡದಲ್ಲಿ ಕಲಿಕೆಯ ವಿಚಾರಕ್ಕೆ ನಾನು ಪರವಾಗಿದ್ದೇನೆ. ಹಳ್ಳಿಗಳಲ್ಲೂ ಈಗ ಇಂಗ್ಲಿಷ್ ಶಾಲೆಗಳು ಬರುತ್ತಿವೆ. ಈ ವಿಚಾರದಲ್ಲಿ ಪೋಷಕರ ನೆರವೂ ಅಗತ್ಯ. ಕನ್ನಡ ತಜ್ಞರ ಭೆಕರೆದು ಕನ್ನಡಶಾಲೆ ಸ ಕರೆದು ಕನ್ನಡಶಾಲೆ ಉಳಿಸುವ ಸಂಬಂಧ ತೀರ್ಮಾನ ಕೈಗೊಳ್ಳಲಾಗುವುದು. ವೈಯಕ್ತಿಕವಾಗಿ ದ್ವಿಭಾಷಾ ನೀತಿ ಪರವಾಗಿದ್ದೇನೆ. ಕ್ಯಾಬಿನೆಟ್‌ನಲ್ಲಿ ಈ ಕುರಿತು ಚರ್ಚಿಸಿ ಕ್ರಮ ವಹಿಸಲಿದ್ದೇವೆ. ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲೂ ನಿರ್ಧಾರ ಕೈಗೊಳ್ಳುವ ಬಗ್ಗೆ ಸಂಪುಟದಲ್ಲಿ ಸರ್ಕಾರ ಚರ್ಚಿಸಲಿದೆ ಎಂದು ತಿಳಿಸಿದರು.

You may also like