HD Thammaiah: ನಾನು ಕಾಂಗ್ರೆಸ್ ಶಾಸಕನಾಗಿದ್ದರೂ, ನಾನು ಆರ್ ಎಸ್ ಎಸ್ ನ ಸ್ವಯಂ ಸೇವಕ ಎಂದು ಕಾಂಗ್ರೆಸ್ ಶಾಸಕರೊಬ್ಬರು ಹೇಳಿ ಅಚ್ಚರಿ ಹೇಳಿಕೆ ನೀಡಿದ್ದಾರೆ.
ಚಿಕ್ಕಮಗಳೂರು ಶಾಸಕ ಎಚ್.ಡಿ ತಮ್ಮಯ್ಯ ಗವನಹಳ್ಳಿ (HD Thammaiah Gavanahalli), ರಾಂಪುರ ಗ್ರಾಮಗಳ ಸಾಮಿಲ್ ಮಾಲೀಕರ ಸಂಘ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡುತ್ತಿದ್ದರು.’ ನಾನು ಬಿಜೆಪಿಯಲ್ಲಿ 16 ವರ್ಷ ಇದ್ದು, ಸಂಘದ ಸ್ವಯಂ ಸೇವಕನಾಗಿ ಕೆಲಸ ಮಾಡಿದ್ದೆ, ಈಗಲೂ ಸಂಘದ ಸ್ವಯಂ ಸೇವಕನಾಗಿದ್ದೇನೆ’ ಎಂದು ನೇರವಾಗಿ ಹೇಳಿದ್ದಾರೆ.
‘ ನಾನು RSS ಸ್ವಯಂ ಸೇವಕನಾಗಿ ಕೆಲಸ ಮಾಡಿದ್ದೆ, ಈಗಲೂ ಸಂಘದ ಸ್ವಯಂ ಸೇವಕನಾಗಿದ್ದೇನೆ. ಆದರೆ ನಾನು ಜಾತ್ಯತೀತ ವ್ಯಕ್ತಿ. ಅಂದರೆ ಎಲ್ಲರನ್ನೂ ಒಟ್ಟಾಗಿ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ‘ ಎಂದು ತಮ್ಮಯ್ಯ ಹೇಳಿದ್ದಾರೆ.
‘ ನಾನು ಶಾಸಕನಾಗಿ ಪ್ರಮಾಣ ವಚನ ಸ್ವೀಕರಿಸುವಾಗ ಕೂಡ ಎಲ್ಲರನ್ನು ಜತೆಗೆ ಒಟ್ಟಾಗಿ ಕೊಂಡೊಯ್ಯವ ನಿಟ್ಟಿನಲ್ಲಿ ಸ್ವೀಕರಿಸಿದ್ದೇನೆ. ಆದ್ದರಿಂದ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವುದು ನನ್ನ ಮೊದಲ ಆದ್ಯತೆ ‘ ಎಂದು ಎಚ್‌ಡಿ ತಮ್ಮಯ್ಯ ಹೇಳಿದ್ದಾರೆ.
ಇದನ್ನೂ ಓದಿ: Karnataka Congress: ನೂತನ ಸಚಿವರಿಗೆ ಇನ್ನೂ ಖಾತೆ ಹಂಚಿಕೆಯಾಗಿಲ್ಲ, ನಕಲಿ ಪಟ್ಟಿ ನಂಬಬೇಡಿ- ಕಾಂಗ್ರೆಸ್ ಸ್ಪಷ್ಟನೆ
