Home » ಮುಖ್ಯಮಂತ್ರಿ ಬೊಮ್ಮಾಯಿ ತವರೂರಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ!! ಈ ಬಾರಿಯೂ ಬಂಕಾಪುರ ಪುರಸಭೆ ಚುನಾವಣೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್

ಮುಖ್ಯಮಂತ್ರಿ ಬೊಮ್ಮಾಯಿ ತವರೂರಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ!! ಈ ಬಾರಿಯೂ ಬಂಕಾಪುರ ಪುರಸಭೆ ಚುನಾವಣೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್

0 comments

ಮುಖ್ಯಮಂತ್ರಿ ಬೊಮ್ಮಾಯಿ ತವರು ಜಿಲ್ಲೆಯಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ ಉಂಟಾಗಿದ್ದು, ಕಾಂಗ್ರೆಸ್ ಜಯಭೇರಿ ಬಾರಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿದೆ.

ಸಿ.ಎಂ ಬಸವರಾಜ ಬೊಮ್ಮಾಯಿ ತವರು ಜಿಲ್ಲೆಯಾದ ಹಾವೇರಿಯ ಬಂಕಾಪುರ ಪುರಸಭೆಯಲ್ಲಿ ಒಟ್ಟು 23 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಅದರಲ್ಲಿ 14 ಸ್ಥಾನವನ್ನು ಕಾಂಗ್ರೆಸ್ ಗಟ್ಟಿಯಾಗಿಸಿಕೊಂಡಿದೆ. ಉಳಿದಂತೆ ಬಿಜೆಪಿ 07, ಹಾಗೂ ಪಕ್ಷೇತರದ ಇಬ್ಬರು ಅಭ್ಯರ್ಥಿಗಳು 02 ಸ್ಥಾನ ಪಡೆದಿದ್ದಾರೆ. ಈ ಮೊದಲು ಇಲ್ಲಿ ಮೂರೂವರೆ ವರ್ಷಗಳ ಕಾಲ ಕಾಂಗ್ರೆಸ್ ಹಾಗೂ ಒಂದೂವರೆ ವರ್ಷಗಳ ಕಾಲ ಬಿಜೆಪಿ ಆಡಳಿತ ನಡೆಸಿತ್ತು.

ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಹಲವು ಅಭಿವೃದ್ಧಿ ಕಾಮಗರಿಗಳ ಆರಂಭಗೊಂಡಿದ್ದು, ಇದಕ್ಕಾಗಿಯೇ ಈ ಬಾರಿಯೂ ಕೂಡಾ ಜನ ಕಾಂಗ್ರೆಸ್ ಗೆಲ್ಲಿಸಿದ್ದಾರೆ ಎನ್ನಲಾಗುತ್ತಿದೆ.

ಇತ್ತ ಗುತ್ತಲ ಪಟ್ಟಣ ಪಂಚಾಯತ್ ಕೂಡಾ ಕೈ ವಶವಾಗಿದ್ದು, ಹಾಗೂ ಹಾನಗಲ್ ಪುರಸಭೆಯ 19 ವಾರ್ಡ್ ನಲ್ಲೂ ಕಾಂಗ್ರೆಸ್ ಬೆಂಬಲಿತರು ಜಯಗಳಿಸಿದ್ದಾರೆ.

You may also like

Leave a Comment