CM Siddaramaiah: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳಿಗೆ(Congress Guarantees) ರಾಜ್ಯಾದ್ಯಂತ ಭಾರೀ ರೆಸ್ಪಾನ್ಸ್ ಸಿಗುತ್ತಿದೆ. ನಾಡಿನ ಜನ ಇದರ ಲಾಭ ಪಡೆಯುತ್ತಿದ್ದಾರೆ. ಆದರೆ ಲೋಕಸಭಾ ಚುನಾವಣೆ ಬಳಿಕ ಈ ಗ್ಯಾರಂಟಿಗಳು ರದ್ದಾಗುತ್ತವೆ ಎಂಬ ಮಾತು ಕೇಳಿಬಂದಿತ್ತು. ಇದೀಗ ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ನಡೆದ ಬಳಿಕ ಈ ವಿಚಾರ ಮತ್ತೆ ಚರ್ಚೆಯಾಗುತ್ತಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ(CM Siddaramaiah) ಹೊಸ ಭರವಸೆ ನೀಡಿದ್ದಾರೆ.
ಇದನ್ನೂ ಓದಿ: Vijayapura: ವೇದಿಕೆ ಏರಿದ ಸಿದ್ದರಾಮಯ್ಯ, ತಕ್ಷಣ ಕೆಳಗಿಳಿದು ಹೋದ ರಾಹುಲ್ ಗಾಂಧಿ !! ಕಾಂಗ್ರೆಸ್ ಸಮಾವೇಶದಲ್ಲಿ ಸಿಎಂಗೆ ಮುಜುಗರ
ಹೌದು, ವಿಜಯಪುರದ(Vijayapura) ಸೊಲ್ಲಾಪುರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು ‘ಲೋಕಸಭೆ ಚುನಾವಣೆ ಬಳಿಕ ಗ್ಯಾರಂಟಿಗಳನ್ನು ನಿಲ್ಲಿಸಲಾಗುತ್ತದೆ ಎಂದು ನಮ್ಮ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ. ನಾವು ಯಾವುದೇ ಕಾರಣಕ್ಕೂ ಈ ಗ್ಯಾರಂಟಿಗಳನ್ನು ಸ್ಥಗಿತ ಮಾಡೋದಿಲ್ಲ ಎಂದು ಸ್ಪಷ್ಟೀಕರಣ ನೀಡಿ, ಭರವಸೆ ನೀಡಿದ್ದಾರೆ.
ಇದನ್ನೂ ಓದಿ: Puttur: ಕೆ.ಎಸ್.ಆರ್. ಟಿ.ಸಿ ಮತ್ತು ರಿಕ್ಷಾ ನಡುವೆ ಭೀಕರ ಅಪಘಾತ- ರಿಕ್ಷಾ ಚಾಲಕ ಮೃತ್ಯು
ಗ್ಯಾರಂಟಿಗಳಿಂದ ಕಾಂಗ್ರೆಸ್ ಗೆ ಲಾಭ:
ಕಳೆದ ವಿಧಾನಸಭಾ ಚುನಾವಣೆಯಲ್ಲಿ(Assembly election) ಕಾಂಗ್ರೆಸ್ ಪಂಚ ಗ್ಯಾರಂಟಿಗಳನ್ನು ಘೋಷಿಸಿ 135 ಸ್ಥಾನಗಳಲ್ಲಿ ಗೆದ್ದು ಅಧಿಕಾರಕ್ಕೆ ಬಂದಿತ್ತು. ಅಲ್ಲದೆ ಅಧಿಕಾರಕ್ಕೆ ಬಂದ ಬಳಿಕ ಅಲ್ಪ ಅವಧಿಯಲ್ಲೇ ಅವೆಲ್ಲವನ್ನೂ ಅನುಷ್ಠಾನಗೊಳಿಸಿತ್ತು. ಹೀಗಾಗಿ ಲೋಕಸಭಾ ಚುನಾವಣೆಗೂ ಕಾಂಗ್ರೆಸ್ ಗ್ಯಾರಂಟಿ ಅಸ್ತ್ರ ಬಳಸಿ ಪ್ರಚಾರ ನಡೆಸಿದೆ. ಜೊತೆಗೆ ಇದರ ಲಾಭ ಪಡೆಯುವ ಮಹಿಳೆಯರು ಈ ಸಲ ಕಾಂಗ್ರೆಸ್ ಕೈ ಹಿಡಿಯುವ ಸಾಧ್ಯತೆ ಇದೆ. ಹೀಗಾಗಿ ಕಳೆದ ಲೋಕಸಭಾ ಚುನಾವಣೆಯಲ್ಲಿ 1 ಸ್ಥಾನ ಗೆದ್ದಿದ್ದ ಕಾಂಗ್ರೆಸ್ ಈ ಸಲ 3, 4 ಸ್ಥಾನ ಗೆಲ್ಲುವ ಸಾಧ್ಯತೆಗಳು ಇವೆ ಎನ್ನಲಾಗಿದೆ.
ಮುಸ್ಲಿಂ ಮೀಸಲಾತಿಯಿಂದ ಹಿಂದೂಗಳಿಗೆ ಅನ್ಯಾಯ ಆಗಲ್ಲ:
ಇನ್ನು ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿ ವಿಚಾರ ಮುನ್ನಲೆಗೆ ಬಂದಿದ್ದು ಈ ಕುರಿತು ಪ್ರತಿಕ್ರಿಯಿಸಿದ ಅವರು ಮುಸ್ಲಿಮರಿಗೆ ಮೀಸಲಾತಿ ಕೊಡಲು ಸಾಧ್ಯವಿಲ್ಲ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ನಾವು ಹಿಂದೂಗಳ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ಕೊಡುತ್ತಿದ್ದೇವೆ ಅಂತ ಮೋದಿ ಸುಳ್ಳು ಹೇಳುತ್ತಿದ್ದಾರೆ. ಇದು ಶುದ್ಧ ಸುಳ್ಳು, ಯಾರ ಮೀಸಲಾತಿಯನ್ನು ನಾವು ಕಸಿಯುವುದಿಲ್ಲ. ನಮ್ಮ ಸರ್ಕಾರಕ್ಕೆ ಮಸಿ ಬಳಿಯಲು ಬಿಜೆಪಿ ಈ ನಾಟಕವಾಡುತ್ತಿದೆ ಎಂದು ಹೇಳಿದ್ದಾರೆ.
