Home » Karnataka: ರಾಜ್ಯ ಪೊಲೀಸರಿಗೆ ಸಿಹಿ ಸುದ್ದಿ ನೀಡಿದ ಸಿಎಂ!!!

Karnataka: ರಾಜ್ಯ ಪೊಲೀಸರಿಗೆ ಸಿಹಿ ಸುದ್ದಿ ನೀಡಿದ ಸಿಎಂ!!!

1 comment
Karnataka

Karnataka: ರಾಜ್ಯ ಪೊಲೀಸ್‌ ಇಲಾಖೆಯ( Police Department)ಅಧಿಕಾರಿಗಳು, ಸಿಬ್ಬಂದಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು(CM Siddarammya)ಸಿಹಿ ಸುದ್ದಿ ನೀಡಿದ್ದಾರೆ. ಭವ್ಯವಾದ ಸುಸಜ್ಜಿತ ಪೊಲೀಸ್‌ ಭವನ ನಿರ್ಮಾಣ ಹಾಗೂ ರಾಜ್ಯದ (Karnataka)ಪೊಲೀಸ್‌ ಸಿಬಂದಿಗೆ ಬೆಳ್ಳಿ ಪದಕ ವಿತರಣೆಗೆ ತೀರ್ಮಾನಿಸುವ ಮೂಲಕ ರಾಜ್ಯ ಸರಕಾರ ಪೊಲೀಸ್‌ ಇಲಾಖೆಗೆ ಸಿಎಂ ಗುಡ್ ನ್ಯೂಸ್ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ರಾಜ್ಯ ಪೊಲೀಸ್‌ ಪ್ರಧಾನ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಗುಡ್ ನ್ಯೂಸ್ ನೀಡಿದ್ದಾರೆ. ಕರ್ನಾಟಕ ಏಕೀಕರಣ ಹಾಗೂ ಕರ್ನಾಟಕ ಪೊಲೀಸ್‌ ನಾಮಕರಣದ ಸುವರ್ಣ ಮಹೋತ್ಸವದ ಅಂಗವಾಗಿ ಪೊಲೀಸ್‌ ಭವನ ನಿರ್ಮಾಣಕ್ಕೆ ಮುಂದಿನ ಬಜೆಟ್‌ನಲ್ಲಿ ಹಣ ನಿಗದಿ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದನ್ನೂ ಓದಿ: Yatindra Siddaramaiah: ಸಿದ್ದರಾಮಯ್ಯ ಇದೊಂದು ಕೆಲಸ ಮಾಡಿದ್ರೆ, ಪೂರ್ಣಾವಧಿ ಸಿಎಂ ಆಗಿರ್ತಾರೆ !! ಪುತ್ರ ಯತೀಂದ್ರನ ಸ್ಪೋಟಕ ಹೇಳಿಕೆ

ಏಕೀಕರಣದ ಬಳಿಕ ಕರ್ನಾಟಕ ರಾಜ್ಯ ಪೊಲೀಸ್‌ ಎಂದು ಹೆಸರು ಬದಲಾಗಿದ್ದು, 50 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಎಲ್ಲ ಪೊಲೀಸ್‌ ಅಧಿಕಾರಿ-ಸಿಬಂದಿಗೆ ಬೆಳ್ಳಿ ಪದಕ ನೀಡುವುದಾಗಿ ಸಿಎಂ ಸಿದ್ದರಾಮಯ್ಯನವರು ಘೋಷಿಸಿದ್ದಾರೆ. ಎಲ್ಲ ಪೊಲೀಸ್‌ ಅಧಿಕಾರಿ-ಸಿಬ್ಬಂದಿಗಳ ವಾರ್ಷಿಕ ವೈದ್ಯಕೀಯ ತಪಾಸಣ ಭತ್ಯೆಯನ್ನು 1 ಸಾವಿರ ರೂ.ಗಳಿಂದ 1,500 ರೂ.ಗೆ ಏರಿಕೆ ಮಾಡಲಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇದರ ಜೊತೆಗೆ, ಕರ್ನಾಟಕ ಏಕೀಕರಣ ಹಾಗೂ ಕರ್ನಾಟಕ ಪೊಲೀಸ್‌ ಎಂದು ನಾಮಕರಣಗೊಂಡ ಸುವರ್ಣ ಮಹೋತ್ಸವದ ಅಂಗವಾಗಿ ಸುವರ್ಣ ಭವನ ಹಾಗೂ ಬೆಳ್ಳಿ ಪದಕ ವಿತರಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕಟಿಸಿದ್ದಾರೆ.

You may also like

Leave a Comment