Home » ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದ ವೇದಿಕೆಯ ಬ್ಯಾನರ್‌ನಲ್ಲಿ ಬಿಜೆಪಿ ಸೇರಿರುವ ಎಸ್.ಎಂ.ಕೃಷ್ಣ ಫೋಟೋ

ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದ ವೇದಿಕೆಯ ಬ್ಯಾನರ್‌ನಲ್ಲಿ ಬಿಜೆಪಿ ಸೇರಿರುವ ಎಸ್.ಎಂ.ಕೃಷ್ಣ ಫೋಟೋ

by Praveen Chennavara
0 comments

ಬೆಂಗಳೂರು : ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕ ‌ಎಸ್.ಎಂ ಕೃಷ್ಣ ಅವರ ಫೋಟೋ ವೇದಿಕೆಯ ನಾಯಕರ ಪಟ್ಟಿಯಲ್ಲಿ ಕಂಡುಬಂದಿದ್ದು, ಕಾಂಗ್ರೆಸ್ ನಾಯಕರಿಗೆ ಮುಜುಗರವಾಗಿದೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಮುಜುಗರ ಕಂಡುಬಂದಿದೆ.
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ. ಪಾಟೀಲ್ ಆಯ್ಕೆಯಾದ ಪ್ರಯುಕ್ತ ಆಯೋಜಿಸಿದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡ ಎಸ್.ಎಂ. ಕೃಷ್ಣ ಅವರ ಭಾವಚಿತ್ರವನ್ನು ಹಿರಿಯ‌ ನಾಯಕರ ಸರತಿ ಸಾಲಿನಲ್ಲಿ ಹಾಕಲಾಗಿದೆ.

ಕಾರ್ಯಕ್ರಮದಲ್ಲಿ ರಾಜ್ಯ ಉಸ್ತುವಾರಿ ರಣದೀಪ್ ಸುಂಗ್ ಸುರ್ಜೇವಾಲ, ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

You may also like

Leave a Comment