Good News for Senior Citizens: ರಾಜ್ಯ ಸರ್ಕಾರ (State Government)ಹಿರಿಯ ನಾಗರಿಕರಿಗೆ ಮತ್ತೊಂದು ಗುಡ್ ನ್ಯೂಸ್ (Good News for Senior Citizens)ನೀಡಲು ಮುಂದಾಗಿದೆ. ಹಿರಿಯ ನಾಗರಿಕರ(senior Citizens)ಅನುಕೂಲಕ್ಕಾಗಿ ಜಿಲ್ಲಾ ಕೇಂದ್ರಗಳಲ್ಲಿ ಒಂದೇ ಸೂರಿನಡಿ ಎಲ್ಲಾ ಸೌಲಭ್ಯ ಒದಗಿಸಲು ಯೋಜನೆ ಹಾಕಿಕೊಂಡಿರುವ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ವೃದ್ಧಾಪ್ಯ ವೇತನ ಹೆಚ್ಚಳ ಮಾಡುವುದಕ್ಕೆ ಭಾರಿ ಬೇಡಿಕೆಯಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah)ಮಾಹಿತಿ ನೀಡಿದ್ದಾರೆ. ಮುಂದಿನ 2024-25ನೇ ಸಾಲಿನ ಬಜೆಟ್‌ನಲ್ಲಿ ವೃದ್ಧಾಪ್ಯ ವೇತನವನ್ನು(Old Age Pension)ಹೆಚ್ಚಳ ಮಾಡಲಾಗುವ ಕುರಿತು ಕೂಡ ಮಾಹಿತಿ ನೀಡಿದ್ದಾರೆ. ಇದರ ಬೆನ್ನಲ್ಲೇ ಮತ್ತೊಂದು ಸಿಹಿ ಸುದ್ದಿ ಹೊರಬಿದ್ದಿದೆ. ಹಿರಿಯ ನಾಗರಿಕರಿಗೆ ನೆರವಾಗುವ ನಿಟ್ಟಿನಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಒಂದೇ ಸೂರಿನಡಿ ಎಲ್ಲಾ ಸೌಲಭ್ಯ ಒದಗಿಸಲು ಯೋಜನೆ ರೂಪಿಸಲಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅನುದಾನದಡಿ ಒಂದೇ ಸೂರಿನಡಿ ಎಲ್ಲಾ ಸೌಲಭ್ಯಗಳು ದೊರೆಯುವಂತಾಗಬೇಕು. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಈ ಕುರಿತು ಯೋಜನೆ ಜಾರಿಗೊಳಿಸಲಾಗುವ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
ಇದನ್ನು ಓದಿ: Alvas Job Fair: ಬೃಹತ್ ಆಳ್ವಾಸ್ ಉದ್ಯೋಗ ಮೇಳ; 200ಕ್ಕೂ ಅಧಿಕ ಕಂಪೆನಿಗಳು ಭಾಗಿ!
