Home » Satish Krishna: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಅದಿರು ಸಾಗಣೆ ಕೇಸಲ್ಲಿ ದೋಷಿ-ಕೋರ್ಟ್‌ ಆದೇಶ, ನಾಳೆ ಶಿಕ್ಷೆ ಪ್ರಕಟ

Satish Krishna: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಅದಿರು ಸಾಗಣೆ ಕೇಸಲ್ಲಿ ದೋಷಿ-ಕೋರ್ಟ್‌ ಆದೇಶ, ನಾಳೆ ಶಿಕ್ಷೆ ಪ್ರಕಟ

0 comments

Satish Krishna: ಬೆಲೇಕೇರಿ ಬಂದರಿನಿಂದ ಅಕ್ರಮ ಅದಿರು ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾರವಾರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಆರೋಪಿ ಎಂದು ಜನಪ್ರತಿನಿಧಿಗಳ ನ್ಯಾಯಾಲಯವು ಆದೇಶ ಹೊರಡಿಸಿದೆ. ಶಿಕ್ಷೆ ಪ್ರಮಾಣವನ್ನು ನಾಳೆ ಪ್ರಕಟ ಮಾಡುವುದಕ್ಕೆ ಕಾಯ್ದಿರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈ ಕೂಡಲೇ ಶಾಸಕ ಸತೀಶ್‌ ಸೈಲ್‌ ಅವರನ್ನು ವಶಕ್ಕೆ ಪಡೆಯಲು ಕೋರ್ಟ್‌ ಸೂಚನೆ ನೀಡಿದೆ.

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಾಖಲಾಗಿದ್ದ ಆರು ಪ್ರಕರಣಗಳಲ್ಲಿ ಇದು ಅಂತಿಮ ಆದೇಶ ಹೊರಡಿಸಲಾಗಿದೆ. ಅರಣ್ಯ ಸಂರಕ್ಷಣಾಧಿಕಾರಿ ಆಗಿದ್ದ ಮಹೇಶ್‌ ಬಿಳೆಯಿ, ಶಾಸಕ ಸತೀಶ್‌ ಸೇರಿ ಎಲ್ಲಾ ಆರೋಪಿಗಳು ದೋಷಿ ಎಂದು ಕೋರ್ಟ್‌ ತೀರ್ಪು ನೀಡಿ ಆದೇಶ ಹೊರಡಿಸಿದೆ.

ಶಿಕ್ಷೆಯ ಪ್ರಮಾಣ, ಯಾವ ಮಾನದಂಡದ ಮೇಲೆ ಶಿಕ್ಷೆ ನೀಡಲಾಗುತ್ತದೆ ಎಂಬುವುದನ್ನು ನಾಳೆ ಸಂಜೆ ಕೋರ್ಟ್‌ ಆದೇಶದಲ್ಲಿ ತಿಳಿಯಲಿದೆ.

You may also like

Leave a Comment