Home » Congress: ಬಿಜೆಪಿಯಲ್ಲಿ ಹೀನಾಯ ಸೋಲಿನ ಹೊಣೆ ಹೊರುವವರು ಯಾರು ಇಲ್ವಾ: ಕಾಂಗ್ರೆಸ್‌ ಟ್ವೀಟ್‌ ಮೂಲಕ ಟೀಕೆ

Congress: ಬಿಜೆಪಿಯಲ್ಲಿ ಹೀನಾಯ ಸೋಲಿನ ಹೊಣೆ ಹೊರುವವರು ಯಾರು ಇಲ್ವಾ: ಕಾಂಗ್ರೆಸ್‌ ಟ್ವೀಟ್‌ ಮೂಲಕ ಟೀಕೆ

0 comments
Congress

Congress: ಕರ್ನಾಟಕ ವಿಧಾನ ಸಭೆ ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಕಾಂಗ್ರೆಸ್‌ ಅಧಿಕಾರದ ಚುಕ್ಕಾಣಿ ಹಿಡಿದಿದೆ ಈ ಬೆನ್ನಲ್ಲೆ ಕಾಂಗ್ರೆಸ್‌ ಅಧಿಕೃತ ಟ್ಟಿಟ್ಟರ್‌ ಖಾತೆಯಲ್ಲಿ ಟ್ವೀಟ್‌ ಮಾಡುವ ಮೂಲಕ, ಕಾಂಗ್ರೆಸ್ (Congress) ಪಕ್ಷಕ್ಕೆ ಐತಿಹಾಸಿಕ ಬಹುಮತ ನೀಡಿರುವ ಕರ್ನಾಟಕ ರಾಜ್ಯದ ಜನತೆಗೆ ನನ್ನ ಹೃದಯಪೂರ್ವಕ ಧನ್ಯವಾದಗಳನ್ನು ಸಲ್ಲಿಸಲಾಗಿದೆ.

ಕಾಂಗ್ರೆಸ್ ಪಕ್ಷಕ್ಕೆ ಐತಿಹಾಸಿಕ ಬಹುಮತ ನೀಡಿರುವ ಕರ್ನಾಟಕ ರಾಜ್ಯದ ಜನತೆಗೆ ನನ್ನ ಹೃದಯಪೂರ್ವಕ ಧನ್ಯವಾದಗಳು.

ಈ ಬಹುಮತ ಜನಪರ ಸರ್ಕಾರಕ್ಕಾಗಿ, ಈ ಬಹುಮತ ಬಡವರ ಪರವಾದ ಸರ್ಕಾರಕ್ಕಾಗಿ, ಇದು ವಿಭಜನೆ ರಾಜಕೀಯ ಹಾಗೂ ಭ್ರಷ್ಟಾಚಾರವನ್ನು ತಿರಸ್ಕರಿಸುವ ಜನಾದೇಶ.ಇಂದು ರಚನೆಯಾಗಿರುವ ಕಾಂಗ್ರೆಸ್ ಸರ್ಕಾರ ತನ್ನ ಭರವಸೆಗಳನ್ನು ಈಡೇರಿಸಲು ಬದ್ಧವಾಗಿದೆ.ಈ ಸರ್ಕಾರ ಮೊದಲ ಸಚಿವ ಸಂಪುಟದಲ್ಲಿ ತನ್ನ ಐದು ಗ್ಯಾರಂಟಿ ಯೋಜನೆಗಳಿಗೆ ಅನುಮೋದನೆ ನೀಡಿರುವುದು ಹೆಮ್ಮೆಯ ವಿಚಾರ.
ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಶಾಂತಿ, ಸಾಮರಸ್ಯ ಹಾಗೂ ಪ್ರಗತಿ ಸಾಧಿಸಲು ಬದ್ಧವಾಗಿದೆ.
ಜೈ ಹಿಂದ್ – ಸೋನಿಯಾ ಗಾಂಧಿ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರು

ಈ ಬೆನ್ನಲ್ಲೆ ಬಿಜೆಪಿ ವಿರುದ್ಧ ಟ್ವಿಟ್ಟರ್ನಲ್ಲಿ ಕಾಂಗ್ರೆಸ್‌ ಟೀಕೆ ಮಾಡಿದೆ. ಕಾಂಗ್ರೆಸ್‌ ಅಧಿಕೃತ ಟ್ಟಿಟ್ಟರ್‌ ಖಾತೆಯಲ್ಲಿ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರೂ ಇಲ್ಲವೇ ಎಂದು ಪ್ರಶ್ನಿಸುವ ಮೂಲಕ ಕಿಡಿಕಾರಿದೆ.

ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊರುವವರು, ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರೂ ಇಲ್ಲವೇ ಬಿಜೆಪಿಯಲ್ಲಿ!? ಸೋಲಿನ ಹೊಣೆ ಯಾರದ್ದು ? ಅಮಿತ್ ಷಾಅವರದ್ದೋ? ಬೊಮ್ಮಾಯಿಯವರದ್ದೋ? ಮೋದಿಯವರದ್ದೋ ? ನಳಿನ್ ಕಟೀಲರದ್ದೋ? ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರು?! ಎಂದು ಬಿಜೆಪಿಗೆ ಕಾಂಗ್ರೆಸ್ ಟ್ವೀಟ್ ಮೂಲಕ ಟಾಂಗ್ ನೀಡಲಾಗಿದೆ. ಅಲ್ಲದೇ ನಾನು ಚುನಾವಣಾ ಪ್ರಚಾರ ಸಂದರ್ಭದಲ್ಲಿ ಘೋಷಣೆ ಮಾಡಿ 5 ಗ್ಯಾರಂಟಿಗಳನ್ನು ಘೋಷಣೆ ಮಾಡುವ ಮೂಲಕ ಜನರ ಹಿತ ಕಾಪಾಡುವ ಬದ್ಧತೆ ಹೊಂದಿದ್ದೇವೆ. ಬಿಜೆಪಿ ನಾಯಕರು ಕನ್ನಡಿಗರು ನೀಡಿದ ತಪರಾಕಿಗೆ ಚಿಕಿತ್ಸೆ ಪಡೆದು ರೆಸ್ಟ್ ಮಾಡಲಿ, ಹಾಗೆಯೇ ‘ವಿರೋಧಪಕ್ಷದ ನಾಯಕ’ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಹುಡುಕಿಕೊಳ್ಳಲಿ ಎಂದು ಟ್ವೀಟ್‌ ಮಾಡಿದ್ದಾರೆ.

 

ಇದನ್ನು ಓದಿ: Bike accident: ಚಿಕ್ಕಮಗಳೂರಿನ ಬ್ಲಾಕ್ ಕ್ಯಾಟ್ ಕಮಾಂಡೋ ರಸ್ತೆ ಅಪಘಾತಕ್ಕೆ ಬಲಿ, ಹೊಸ ಬೈಕ್ ರೈಡ್ ಸಂದರ್ಭ ಅವಘಡ

You may also like

Leave a Comment