3
BIGG NEWS: ಇಂದು ರಾಜ್ಯದ ನೂತನ ಸಚಿವರಾಗಿ 24 ಮಂದಿ ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಕ್ಕೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದ್ದು, ಈ ವೇಳೆ 24 ಮಂದಿ ಶಾಸಕರು ಪ್ರಮಾಣ ವಚನ ಸ್ವೀಕರಿಸಿ, ಸಿದ್ದರಾಮಯ್ಯ (CM Siddaramaiah) ಸಂಪುಟಕ್ಕೆ ಸೇರ್ಪಡೆ ಆಗಿದ್ದಾರೆ. ಇನ್ನು ಖಾತೆ ಹಂಚಿಕೆಗೆ ಕ್ಷಣಗಣನೆ ಶುರುವಾಗಿದೆ.
ಪ್ರಮಾಣವಚನ ಸ್ವೀಕರಿಸಿದ 24 ಮಂದಿ ಶಾಸಕರ ಪಟ್ಟಿ (BIGG NEWS) ಹೀಗಿದೆ:-
ಹೆಚ್ ಕೆ ಪಾಟೀಲ್, ಕೃಷ್ಣಭೈರೇಗೌಡ, ಎನ್ ಚೆಲುವರಾಯಸ್ವಾಮಿ, ಕೆ ವೆಂಕಟೇಶ್, ಡಾ.ಹೆಚ್ ಸಿ ಮಹದೇವಪ್ಪ, ಈಶ್ವರ್ ಖಂಡ್ರೆ, ಕೆ ಎನ್ ರಾಜಣ್ಣ, ದಿನೇಶ್ ಗುಂಡೂರಾವ್, ಶರಣಬಸಪ್ಪ ದರ್ಶನಾಪು, ಶಿವಾನಂದ ಪಾಟೀಲ್, ತಿಮ್ಮಾಪುರ ರಾಮಪ್ಪ ಬಾಳಪ್ಪ, ಶಿವರಾಜ ತಂಡರಗಿ, ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಮಂಕಾಳ್ ವೈದ್ಯ, ಲಕ್ಷ್ಮೀ ಹೆಬ್ಬಾಳ, ರಹೀಂ ಖಾನ್, ಡಿ ಸುಧಾಕರ್, ಸಂತೋಷ್ ಎಸ್ ಲಾಡ್, ಎನ್ ಎಸ್ ಬೋಸರಾಜು, ಸುರೇಶ ಬಿಎಸ್, ಮಧು ಬಂಗಾರಪ್ಪ, ಡಾ.ಎಂ.ಸಿ.ಸುಧಾಕ ಹಾಗೂ ಬಿ.ನಾಗೇಂದ್ರ.
