Laxmi Hebbalkar: ಬೆಳಗಾವಿ : ಗೋಹತ್ಯೆ ನಿಷೇಧ ಅಷ್ಟೇ ಅಲ್ಲ, ಯಾವ ಪ್ರಾಣಿಯ ಹತ್ಯೆಯನ್ನೂ ನಾನು ಸಹಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್( Laxmi Hebbalkar) ತಿಳಿಸಿದ್ದಾರೆ.
ಕರ್ನಾಟಕ ವಿಧಾನ ಸಭೆ ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆ ವಿಚಾರವಾಗಿ ರಾಜ್ಯದೆಲ್ಲೆಡೆ ಭಾರೀ ಚರ್ಚೆಗಾಗುತ್ತಿದ್ದು, ಈ ಬೆನ್ನಲ್ಲೆ ಬೆಳಗಾವಿ ಜಿಲ್ಲೆಯಲ್ಲೂ ಮುನ್ನೆಲೆಗೆ ಬಂದಿದ್ದು ಭಾರೀ ಚರ್ಚೆಗೆ ಗ್ರಾಸವಾಗ್ತಿದೆ.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಗೋಹತ್ಯೆ ನಿಷೇಧ ಅಷ್ಟೇ ಅಲ್ಲ, ಯಾವ ಪ್ರಾಣಿಯ ಹತ್ಯೆಯನ್ನೂ ನಾನು ಸಹಿಸುವುದಿಲ್ಲ ಅಭಿವೃದ್ಧಿ ದೃಷ್ಟಿಯಿಂದ ಎಲ್ಲ ನಾಯಕರ ಸಹಮತ ಪಡೆದು ಬೆಳಗಾವಿ ಜಿಲ್ಲೆ ವಿಭಜನೆ ಆಗಬೇಕು. ಈ ಬಗ್ಗೆ ಜಿಲ್ಲೆಯ ನಾಯಕರ ಚರ್ಚೆ ನಡೆಸಿ, ಮುಂದಿನ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ರಾಜ್ಯಾದ್ಯಂತ ಬಾಡಿಗೆದಾರರಿಗೂ ಗೃಹಜ್ಯೋತಿ ಭಾಗ್ಯ ಸಿಗಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ
