Home » Shakti yojana: ರಾಜ್ಯದ ಮಹಿಳೆಯರಿಗೆ ಬಿಗ್ ಶಾಕ್ ನೀಡಿದ ಡಿಕೆ! ಈ ಗ್ಯಾರಂಟಿ ಯೋಜನೆಗೆ ರೆಡ್ ಅಲರ್ಟ್

Shakti yojana: ರಾಜ್ಯದ ಮಹಿಳೆಯರಿಗೆ ಬಿಗ್ ಶಾಕ್ ನೀಡಿದ ಡಿಕೆ! ಈ ಗ್ಯಾರಂಟಿ ಯೋಜನೆಗೆ ರೆಡ್ ಅಲರ್ಟ್

0 comments

Shakti yojana: ರಾಜ್ಯದ ಮಹಿಳೆಯರಿಗೆ ಬಿಗ್ ಶಾಕ್ ಒಂದು ಕಾದಿದೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ (Congress) ಗೆದ್ದು, 5 ಗ್ಯಾರಂಟಿಗಳ (5 guarantees) ಭರವಸೆ ನೀಡಿರುವ ಪ್ರಕಾರ, ಐದು ಭಾರವಸೆಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆ (Shakti yojana) ಮುಖ್ಯವಾಗಿ ಮಹಿಳೆಯರಿಗೆ ಸರ್ಕಾರಿ ಬಸ್​ನಲ್ಲಿ ಉಚಿತ ಪ್ರಯಾಣ ಕಲ್ಪಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಆದರೆ ಈ ಯೋಜನೆಗೆ ಒಂದು ವರ್ಷ ಆದ ಬೆನ್ನಲ್ಲಿ ಮಹಿಳೆಯರಿಗಾಗಿ ಜಾರಿ ಬಂದಿರುವ ಶಕ್ತಿ ಯೋಜನೆ ಕುರಿತು, ಡಿಸಿಎಂ ಡಿಕೆ ಶಿವಕುಮಾರ್ ಪರಿಷ್ಕರಣೆ ಆಗುವ ಕುರಿತು ಡಿಸಿಎಂ ಡಿಕೆಶಿ ಸುಳಿವು ನೀಡಿದ್ದಾರೆ.

https://x.com/DKShivakumar/status/1851535747020399050

ಹೌದು, ವಿಧಾನಸೌಧದ ಬಳಿ ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 20 ನೂತನ ವೋಲ್ವೋ ಐರಾವತ ಕ್ಲಬ್ ಕ್ಲಾಸ್ 2.0 ವಾಹನಗಳಿಗೆ ಚಾಲನೆ ನೀಡಿದ ಬಳಿಕ ಅವರು ಮಾಧ್ಯಮ ಜೊತೆಗೆ ಮಾತನಾಡಿ, ರಾಜ್ಯ ಸಾರಿಗೆ ಸಂಸ್ಥೆಯು ಖಾಸಗಿ ಸಂಸ್ಥೆಗಳನ್ನೂ ಮೀರಿಸಬಲ್ಲ ಗುಣಮಟ್ಟದ ಸೇವೆಗಳನ್ನು ನೀಡುತ್ತಿದೆ. ನಾವು ಶಕ್ತಿ ಯೋಜನೆಯ (Shakti yojana) ಮೂಲಕ ಹೆಣ್ಣುಮಕ್ಕಳು ಉಚಿತವಾಗಿ ಬಸ್ನಲ್ಲಿ ಪ್ರಯಾಣ ಮಾಡುವ ಅವಕಾಶ ಕಲ್ಪಿಸಿದೆವು. ಹಣಕಾಸಿನ ಪರಿಸ್ಥಿತಿ ಚೆನ್ನಾಗಿರುವ ಕೆಲವು ಮಹಿಳೆಯರು ನನ್ನನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದು, ತಾವು ಹಣ ಕೊಟ್ಟು ಪ್ರಯಾಣ ಮಾಡಲು ಬಯಸಿದರೂ ಕಂಡಕ್ಟರ್ಗಳು ಸ್ವೀಕರಿಸುತ್ತಿಲ್ಲ, ಜೊತೆಗೆ ನಮಗೆ ಉಚಿತ ಪ್ರಯಾಣ ಬೇಡ ಎಂದು ಮೆಸೇಜ್ ಹಾಕಿದ್ದಾರೆ. ನಾವು ದುಡ್ಡು ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ. ಈ ಕುರಿತು ಸಚಿವ ರಾಮಲಿಂಗಾ ರೆಡ್ಡಿ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

You may also like

Leave a Comment