DK Shivakumar: ರಾಜ್ಯದಲ್ಲಿ ನಡೆಯುತ್ತಿರುವ ಕುರ್ಚಿ ಕಿತ್ತಾಟಕ್ಕೆ (Karnataka Power Tussle) ಟ್ವಿಸ್ಟ್ ಸಿಕ್ಕಿದೆ. ಜನವರಿ 6ಕ್ಕೆ ಡಿಕೆ ಶಿವಕುಮಾರ್ ಅವರಿಗೆ ಪಟ್ಟಾಭಿಷೇಕವಾಗಲಿದೆ ಎಂದು ಡಿಸಿಎಂ ಆಪ್ತ ಇಕ್ಬಾಲ್ ಹುಸೇನ್(Iqbal Hussain) ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ (DK Shivakumar) ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು, ಅವರಿಗೆ ಅವಕಾಶ ಸಿಗಬೇಕು.ಇದಕ್ಕೆ ಹೈಕಮಾಂಡ್ ಸ್ಪಂದಿಸುತ್ತಿದೆ. ಬಹುಶ: ಜ.6ರಂದು ಸ್ಥಾನ ಸಿಗುವ ಸ್ಥಾನ ಸಿಗುವ ಸಾಧ್ಯತೆಯಿದ್ದು ನನಗೆ ಶೇ.99ರಷ್ಟು ವಿಶ್ವಾಸ ಇದೆ ಎಂದು ಹೇಳಿದರು.ಡಿಕೆ ಶಿವಕುಮಾರ್ ಅವರಿಗೆ ಜ.6 ಮತ್ತು ಜ. 9 ಅದೃಷ್ಟ ಸಂಖ್ಯೆ. ನಮ್ಮಲ್ಲಿ ಯಾವುದೇ ಬಣ ಇಲ್ಲ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಇಬ್ಬರೂ ರಾಜ್ಯದ ಆಸ್ತಿ. ಡಿಕೆಶಿ ಅವರ ಹೋರಾಟಕ್ಕೆ, ಶ್ರಮಕ್ಕೆ ಪ್ರತಿಫಲ ಸಿಗಬೇಕು ಎನ್ನುವುದು ನಮ್ಮ ಬೇಡಿಕೆ ಎಂದರು.
