DK Shivakumar: ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ನೂತನ ಸಿಎಂ ಆಯ್ಕೆ ಕಸರತ್ತು ಮುಂದುವರೆದಿದೆ. ಈಗ ತಾನೇ ಖರ್ಗೆಯವರನ್ನು ಭೇಟಿಯಾಗಲು ಡಿಕೆಶಿ ಆಗಮಿಸಿದ್ದು ಈಗಲೇ ಸಮಾಲೋಚನೆ ಶುರುವಾಗಿದೆ. ಡಿ.ಕೆ. ಶಿವಕುಮಾರ್ (DK Shivakumar), ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ ನಂತರ ಸಿದ್ದರಾಮಯ್ಯನವರು ಡಿಕೆಶಿ ಸಮಾಲೋಚನೆ ನಡೆಸಿದಂತೆ ಪ್ರತ್ಯೇಕ ಸಮಲೋಚನೆ ಖರ್ಗೆ ಅವರ ಜೊತೆ ನಡೆಸಲಿದ್ದಾರೆ.
ಇದಕ್ಕೂ ಮೊದಲು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಮೊದಲು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗುತ್ತೇನೆ. ಬಳಿಕ ಕಾಂಗ್ರೆಸ್ ನ ಎಲ್ಲಾ ನಾಯಕರನ್ನು ಭೇಟಿಯಾಗುವುದಾಗಿ ತಿಳಿಸಿದ್ದರು. ಆ ಸಂದರ್ಭದಲ್ಲಿ ತಮ್ಮ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುವವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳುವ ಎಚ್ಚರಿಕೆಯನ್ನು ಡಿಕೆ ಶಿವಕುಮಾರ್ ಅವರು ನೀಡಿದ್ದಾರೆ.
” ಕಾಂಗ್ರೆಸ್ ಪಕ್ಷ ನನಗೆ ತಾಯಿ ಇದ್ದಂತೆ. ಕಾಂಗ್ರೆಸ್ ಹೈಕಮಾಂಡ್ ಇದೆ, 135 ಶಾಸಕರು ಇದ್ದಾರೆ. ಸಿಎಂ ಸ್ಥಾನ ನೀಡದಿದ್ದರೆ ರಾಜೀನಾಮೆ ಕೊಡುತ್ತೇನೆ ಎನ್ನುವ ಸುದ್ದಿ ಶುದ್ಧ ಸುಳ್ಳು. ಸುಳ್ಳು ಸುದ್ದಿ ಹರಡುವವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ” ಎಂದು ಅವರು ಎಚ್ಚರಿಸಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಇವತ್ತು ಮುಖ್ಯಮಂತ್ರಿ ಘೋಷಣೆ ಆಗುವುದು ಕಷ್ಟ ಎನ್ನಲಾಗುತ್ತಿದೆ. ಮೊದಲಿಗೆ ಖರ್ಗೆ ಅವರ ಜೊತೆ ಡಿಕೆಶಿ ಮತ್ತು ಸಿದ್ದು ಪ್ರತ್ಯೇಕ ಸಮಾಲೋಚನೆ. ತದನಂತರ ಕೇಂದ್ರ ಕಾಂಗ್ರೆಸ್ ಪದಾಧಿಕಾರಿಗಳ ಜೊತೆ ಮೀಟಿಂಗ್. ಹಾಗಿದ್ದರೂ ಎರಡು ನಾಯಕರಗಳು ಜಪಯ್ಯ ಅಂದರು ತಮ್ಮ ನಿರ್ಧಾರಕ್ಕೆ ಬದ್ಧರಾಗಿ ಕುಳಿತಿದ್ದಾರೆ ಆದುದರಿಂದ ಬಿಕ್ಕಟ್ಟು ಇನ್ನೊಂದು ದಿನ ಮುಂದಕ್ಕೆ ಹೋಗುವ ಸಂಭವ ಇದೆ. ಇದೀಗ ಬಂದ ಮಾಹಿತಿ ಪ್ರಕಾರ, ನಾಳೆ ಕಾಂಗ್ರೆಸ್ಸಿನ ಹಿರಿಯ ನಾಯಕರ ಜೊತೆಗೆ ಕಾಂಗ್ರೆಸ್ ಶಾಸಕಾಂಗ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ ಎನ್ನಲಾಗಿದೆ.
ಇದನ್ನು ಓದಿ: Jharkhand: ಮದುವೆ ಬೇಡ ಅಂದದಕ್ಕೆ ಯುವತಿಯ ತಲೆ ಬೋಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ!
