Karnataka BJP: ಭಾರತೀಯ ಜನತಾ ಪಾರ್ಟಿಯು ತನ್ನ ರಾಷ್ಟ್ರ ಅಧ್ಯಕ್ಷರ ನೇಮಕ ಕಾರ್ಯದ ಪ್ರಕ್ರಿಯೆಯನ್ನು ಆರಂಭಿಸಿದೆ. ಇದಕ್ಕೂ ಮೊದಲಾಗಿ ವಿವಿಧ ರಾಜ್ಯಗಳಿಗೆ ನೂತನ ರಾಜ್ಯ ಅಧ್ಯಕ್ಷರನ್ನು ನೇಮಿಸಿ ಆದೇಶ ಹೊರಡಿಸಿದೆ. ಇದರೊಂದಿಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ವಿಚಾರವೂ ಕೂಡ ಕ್ಲೈಮ್ಯಾಕ್ಸ್ ಹಂತ ತಲುಪಿದೆ ಎನ್ನಲಾಗಿದೆ.
ಈಗಾಗಲೇ ದೇಶಾದ್ಯಂತ ಸುಮಾರು 16 ರಾಜ್ಯಗಳಿಗೆ ನೂತನ ಬಿಜೆಪಿ ರಾಜ್ಯಾಧ್ಯಕ್ಷರನ್ನು ಬಿಜೆಪಿ ಹೈಕಮಾಂಡ್ ನೇಮಿಸಿದೆ. ಕೆಲವು ರಾಜ್ಯಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಈ ನಡುವೆ ಬಾರಿ ಕುತೂಹಲ ಕೆರಳಿಸಿದ್ದ ಕರ್ನಾಟಕದ ಬಿಜೆಪಿ ರಾಜ್ಯ ಅಧ್ಯಕ್ಷರ ವಿಚಾರವೂ ಕೂಡ ಸುಖಾಂತ್ಯವನ್ನು ಕಂಡಿದೆ ಎನ್ನಲಾಗುತ್ತಿದೆ. ಹೀಗಾಗಿ, ಕರ್ನಾಟಕದಲ್ಲೂ ಇಂದು ಅಥವಾ ನಾಳೆ ರಾಜ್ಯಾಧ್ಯಕ್ಷರ ನೇಮಕಾತಿ ಘೋಷಿಸುವ ಸಾಧ್ಯತೆ ಇದೆ. ಹಾಲಿ ಅಧ್ಯಕ್ಷ ವಿಜಯೇಂದ್ರ ಭವಿಷ್ಯವೂ ನಿರ್ಧಾರವಾಗಲಿದೆ.
