Home » ಮಂಗಳೂರು : ದರ್ಗಾ, ದೈವಸ್ಥಾನ, ಚರ್ಚ್ ಗೆ ಭೇಟಿ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ

ಮಂಗಳೂರು : ದರ್ಗಾ, ದೈವಸ್ಥಾನ, ಚರ್ಚ್ ಗೆ ಭೇಟಿ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ

0 comments

ಮಂಗಳೂರು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳೂರು ಪ್ರವಾಸದಲ್ಲಿದ್ದಾರೆ. ನಿನ್ನೆ ಅವರು ಉಳ್ಳಾಲದ ಐತಿಹಾಸಿಕ ಸೈಯ್ಯದ್ ಮದನಿ ದರ್ಗಾ ಉರುಸ್ ಕಾರ್ಯಕ್ರಮಕ್ಕೆ ಭೇಟಿ ನೀಡಿದ್ದಾರೆ. ಅದಕ್ಕೂ ಮೊದಲು ತೊಕ್ಕೊಟ್ಟಿನಲ್ಲಿರುವ ಸಂತ ಸೆಬಾಸ್ಟಿಯನ್ ಚರ್ಚ್ ಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಜೊತೆಗೆ ಶ್ರೀ ಬಬ್ಬು ಸ್ವಾಮಿ ದೇವಸ್ಥಾನ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಯು ಟಿ ಖಾದರ್, ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್ ಮತ್ತಿತರರು ಉಪಸ್ಥಿತರಿದ್ದರು.

You may also like

Leave a Comment