Home » CM Siddaramaiah: ಬಿಜೆಪಿಗೆ ಮರಳುವ ಭಯ – ಲಕ್ಷ್ಮಣ ಸವದಿಗೆ ಬಂಪರ್ ಗಿಫ್ಟ್ ನೀಡಿದ ಸಿದ್ದರಾಮಯ್ಯ!!

CM Siddaramaiah: ಬಿಜೆಪಿಗೆ ಮರಳುವ ಭಯ – ಲಕ್ಷ್ಮಣ ಸವದಿಗೆ ಬಂಪರ್ ಗಿಫ್ಟ್ ನೀಡಿದ ಸಿದ್ದರಾಮಯ್ಯ!!

0 comments

CM Siddaramaiah: ಜಗದೀಶ್ ಶೆಟ್ಟರ್ ಬೆನ್ನಲ್ಲೇ ಲಕ್ಷ್ಮಣ ಸವದಿಯವರು ಬಿಜೆಪಿ ಸೇರುವ ಭಯ ಕಾಂಗ್ರೆಸ್ ಗೆ ಕಾಡುತ್ತಿದ್ದು, ಇದನ್ನು ತಪ್ಪಿಸಸಲು ಸವದಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ನವರು ಭರ್ಜರಿ ಗಿಫ್ಟ್ ನೀಡಿದ್ದಾರೆ.

 

ಕಳೆದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಲಕ್ಷ್ಮಣ ಸವದಿ(Lakshmana savadi)ಯವರು ಮರಳಿ ಬಿಜೆಪಿ ಸೇರುತ್ತಾರೆ, ಲೋಕಸಭಾ ಟಿಕೆಟ್ ಪಡೆದು ಕಣಕ್ಕಿಳಿಯುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಬೆನ್ನಲ್ಲೇ ಇದನ್ನು ತಪ್ಪಿಸಲು ಸಿಎಂ ಸಿದ್ದರಾಮಯ್ಯನವರು ಮಾಸ್ಟರ್ ಪ್ಲಾನ್ ಮಾಡಿದ್ದು, ಅಥಣಿಯ ಮಹತ್ತರ ಯೋಜನೆಯಾದ ಅಮ್ಮಾಜೇಶ್ವರಿ ಏತ ನೀರಾವರಿಗೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದಾರೆ.

 

ಹೌದು, ಅಲ್ಲದೇ ಲಕ್ಷ್ಮಣ ಸವದಿ ಕ್ಷೇತ್ರ ಅಥಣಿ ಮತಕ್ಷೇತ್ರಕ್ಕೆ ಭರಪೂರ ಅನುದಾನ ಸಿಕ್ಕಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah)ಅವರು ಅಥಣಿ ಕ್ಷೇತ್ರಕ್ಕೆ ಭರ್ಜರಿ ಗಿಫ್ಟ್ ನೀಡಲಾಗಿದೆ. ಅಥಣಿ ಕ್ಷೇತ್ರದ ಮಹತ್ತರ ಯೋಜನೆಯಾದ 1486 ಕೋಟಿ ರೂಪಾಯಿ ವೆಚ್ಚದ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಗೆ ಅನುದಾನ ನೀಡಲಾಗಿದ್ದು, 11 ಹಳ್ಳಿಗಳ 9950 ಹೆಕ್ಟೇರ್ ಪ್ರದೇಶ ಹಾಗೂ 13 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದೆ.

 

ಅಂದಹಾಗೆ ಬಸವರಾಜ್ ಬೊಮ್ಮಾಯಿ ಅವರು ಗೋಕರ್ಣದಲ್ಲಿ ಈ ಯೋಜನೆಗೆ ಚಾಲನೆ ನೀಡಲಾಯ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಾಮಗಾರಿಯನ್ನ ಕೈ ಬಿಡಲಾಗಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೇ ಹಂತದ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ. ಇದೇ ತಿಂಗಳು 18 ಅಥವಾ 19 ರಂದು ಕಾಮಗಾರಿಗೆ ಚಾಲನೆ ನೀಡಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ :ಲೋಕಸಭಾ ಚುನಾವಣೆ ಕಾಂಗ್ರೆಸ್ ನಿಂದ ಮೊದಲ ಗ್ಯಾರಂಟಿ ಘೋಷಣೆ !!

You may also like

Leave a Comment