Home » ಪ್ರಜಾಧ್ವನಿ ಯಾತ್ರೆ ವೇಳೆ ಕಲಾವಿದರ ಮೇಲೆ ಹಣ ಎಸೆದ ಪ್ರಕರಣ; ಡಿ.ಕೆ ಶಿವಕುಮಾರ್‌ ವಿರುದ್ಧ ಎಫ್‌ ಐಆರ್‌ ದಾಖಲು

ಪ್ರಜಾಧ್ವನಿ ಯಾತ್ರೆ ವೇಳೆ ಕಲಾವಿದರ ಮೇಲೆ ಹಣ ಎಸೆದ ಪ್ರಕರಣ; ಡಿ.ಕೆ ಶಿವಕುಮಾರ್‌ ವಿರುದ್ಧ ಎಫ್‌ ಐಆರ್‌ ದಾಖಲು

1 comment
DK Shivakumar

DK Shivakumar : ಮಂಡ್ಯ: ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಮೇ. 10 ರಂದು ಮತದಾನ ನಡೆಯಲಿದೆ. ಈಗಾಗಲೇ ರಾಜ್ಯದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದೆ. ಹೀಗಾಗಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇದೀಗ ರಾಜಕೀಯ ನಾಯಕರು ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ಇನ್ನು ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಪೊಲೀಸರು ಕೂಡ ರಾಜ್ಯದಲ್ಲಿ ಫುಲ್‌ ಅಲರ್ಟ್‌ ಆಗಿದೆ. ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಚೆಕ್‌ ಪೋಸ್ಟ್‌ ತೆರೆಯಲಾಗಿದೆ. ಅಕ್ರಮವಾಗಿ ಸಾಗಿಸುತ್ತಿದ್ದ, ಸೀರೆ, ಹಣ, ಮದ್ಯ ಈಗಾಗಲೇ ಪೊಲೀಸರು ಜಪ್ತಿ ಪಡೆದಿದ್ದಾರೆ.

ಇದೀಗ ಮಂಡ್ಯದಲ್ಲಿ ಕಾಂಗ್ರೆಸ್‌ ಗೆ ಪ್ರಜಾಧ್ವನಿ ಯಾತ್ರೆ ನಡೆಯುತ್ತಿದ್ದ ವೇಳೆ ಕಲಾವಿದರ ಮೇಲೆ 500 ರೂಪಾಯಿ ನೋಟಿನ ಕಂತೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ (DK Shivakumar )ಸಂಕಷ್ಟ ಎದುರಾಗಿದೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್‌ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಡಿಕೆ ಶಿವಕುಮಾರ್​​ ವಿರುದ್ಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 1860 u/s 17 E ಆರ್​ಪಿ ಆಕ್ಟ್ ಪ್ರಕಾರ ಎಫ್​ಐಆರ್​ ದಾಖಲಾಗಿದೆ.

ಇನ್ನು ಚುನಾವಣಾ ಸೆಕ್ಟರ್ ಅಧಿಕಾರಿಯಿಂದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣದ ತನಿಖೆ ನಡೆಸುವಂತೆ ನ್ಯಾಯಾಲಯ ಆದೇಶಿಸಿದ್ದಾರೆ. ಅದರಂತೆ ಮಂಡ್ಯ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾರ್ಚ್ 28ರಂದು ಶ್ರೀರಂಗಪಟ್ಟಣ ವಿಧಾನಸಭೆ ಕ್ಷೇತ್ರದ ಬೇವಿನಹಳ್ಳಿ ಗ್ರಾಮದಲ್ಲಿ ಪ್ರಜಾಧ್ವನಿ ಯಾತ್ರೆ ಕೈಗೊಂಡಿದ್ದರು. ಈ ವೇಳೆ ಬಸ್‌ ಮೇಲಿಂದ ಕಲಾವಿದರಿಗೆ 500 ರೂ. ನೋಟುಗಳನ್ನು ಎಸೆದಿದ್ದರು. ನಂತರ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಸೆಕ್ಟರ್ ಆಫೀಸರ್​ ದೂರು ನೀಡಿದ್ದರು.ಇದೀಗ ನ್ಯಾಯಾಲಯದ ಆದೇಶದಂತೆ ನಿನ್ನೆ ಡಿಕೆ ಶಿವಕುಮಾರ್​ ವಿರುದ್ದ ಎಫ್‌ಐ‌ಆರ್ ದಾಖಲಾಗಿದೆ.
ಒಟ್ಟಾರೆಯಾಗಿ ಚುನಾವಣೆ ಹೊಸ್ತಿಲಲ್ಲೇ ಡಿ.ಕೆ ಶಿವಕುಮಾರ್‌ ಗೆ ಸಂಕಷ್ಟ ಎದುರಾಗಿದೆ.

You may also like

Leave a Comment