Home » K S Eshwarappa: ನನಗೆ ಎಲ್ಲಿ ಹೋದರೂ ಇದೊಂದು ತಲೆನೋವು! ಮೈಕ್ ನಲ್ಲಿ ಕೂಗಿದರೇ ಅಲ್ಲಾಗೆ ಕಿವಿ ಕೇಳೋದಾ?: ಆಝಾನ್ ವಿರುದ್ಧ ಗುಡುಗಿದ ಈಶ್ವರಪ್ಪ

K S Eshwarappa: ನನಗೆ ಎಲ್ಲಿ ಹೋದರೂ ಇದೊಂದು ತಲೆನೋವು! ಮೈಕ್ ನಲ್ಲಿ ಕೂಗಿದರೇ ಅಲ್ಲಾಗೆ ಕಿವಿ ಕೇಳೋದಾ?: ಆಝಾನ್ ವಿರುದ್ಧ ಗುಡುಗಿದ ಈಶ್ವರಪ್ಪ

by ಹೊಸಕನ್ನಡ
1 comment

K.S Eshwarappa : ‘ಮೈಕ್ ನಲ್ಲಿ ಕೂಗಿದರೆ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ, ನನಗೆ ಎಲ್ಲಿ ಹೋದರೂ ಇದೊಂದು ತಲೆನೋವು’ ಎಂದು ಬಿಜೆಪಿ ನಾಯಕ, ಶಾಸಕ ಈಶ್ವರಪ್ಪ(K.S Eshwarappa) ತಾವು ಭಾಷಣ ಮಾಡುವ ವೇಳೆ ಆರಂಭವಾದ ಆಝಾನ್ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ.

ಮಂಗಳೂರಿ(Mangalore) ನ ಕಾವೂರಿ(Kavuru) ನಲ್ಲಿ ಬಿಜೆಪಿ(BJP) ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಈಶ್ವರಪ್ಪ ಭಾಷಣ ಮಾಡ್ತಿದ್ದಾಗ ಸ್ಥಳೀಯ ಮಸೀದಿಯಿಂದ ಆಝಾನ್ ಕೇಳಿಬಂತು. ಇದಕ್ಕೆ ಸಿಟ್ಟಾದ ಈಶರಪ್ಪ ನನಗೆ ಎಲ್ಲಿ ಹೋದರೂ ಇದೊಂದು ತಲೆನೋವು. ಮೈಕ್ ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ ಎಂದು ಪ್ರಶ್ನಿಸೋದ್ರೊಂದಿಗೆ ಆಕ್ರೋಶ ಹೊರಹಾಕಿದ್ದಾರೆ.

ನಮ್ಮ ದೇವಸ್ಥಾನಗಳಲ್ಲೂ ಪೂಜೆ ಮಾಡುತ್ತೇವೆ. ಶ್ಲೋಕ, ಭಜನೆಗಳನ್ನು ಹೇಳಲಾಗುತ್ತದೆ. ಅವರಿಗಿಂತ ಹೆಚ್ಚು ಭಕ್ತಿ ನಮ್ಮಲ್ಲೂ ಇದೆ. ಪ್ರಪಂಚದಲ್ಲಿ ಧರ್ಮವನ್ನು ಉಳಿಸುವಂಥಹ ದೇಶ ಭಾರತ ಮಾತ್ರ. ಆದರೆ ಮೈಕ್ ಹಿಡ್ಕೊಂಡು ಮಾತ್ರ ಹೇಳಿದರೆ ಅವನಿಗೆ ಕಿವುಡಾ ಎಂದು ಕೇಳಬೇಕಾಗುತ್ತದೆ. ಆದ್ದರಿಂದ ಈ ಸಮಸ್ಯೆ ಆದಷ್ಟು ಬೇಗ ಪರಿಹಾರ ಆಗಬೇಕು ಎಂದು ಆಝಾನ್ ಬಗ್ಗೆ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

You may also like

Leave a Comment