Home Karnataka State Politics Updates Governor: ವಿಧಾನಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲ್ಲ ಎಂದ ರಾಜ್ಯಪಾಲ ಗೆಹ್ಲೋಟ್!!

Governor: ವಿಧಾನಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲ್ಲ ಎಂದ ರಾಜ್ಯಪಾಲ ಗೆಹ್ಲೋಟ್!!

Governor : ರಾಜ್ಯ ಸರ್ಕಾರಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹಲೊಟ್ ಅವರು ದೊಡ್ಡ ಶಾಕ್ ನೀಡಿದ್ದು, ಇಂದು ಶುರುವಾಗಲಿರೋ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲರು ನಿರಾಕರಿಸಿದ್ದಾರೆ. 

ಹೌದು, ನರೇಗಾ ಕಾನೂನು ಬದಲಾವಣೆ ಮಾಡಿ ವಿಬಿ ರಾಮ್ ಜಿ ಕಾಯಿದೆ ತಂದಿರುವುದನ್ನು ವಿರೋಧಿಸಿ ಖಂಡನಾ ನಿರ್ಣಯ ಕೈಗೊಳ್ಳಲು ಸಿದ್ದರಾಮಯ್ಯ ಸರ್ಕಾರ ವಿಶೇಷ ಅಧಿವೇಶನ ನಡೆಸಲು ತೀರ್ಮಾನಿಸಿದ್ದು, ಇಂದಿನಿಂದ(ಜನವರಿ 22) ಜ.31ರವರೆಗೆ ಸೆಷನ್ ನಡೆಸಲು ನಿರ್ಧರಿಸಲಾಗಿದೆ. ಆದರೆ ಇದೀಗ ವಿಧಾನಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಿರಾಕರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸರ್ಕಾರದ ಭಾಷಣ ಓದಲು ರಾಜ್ಯಪಾಲರು ನಿರಾಕರಿಸಿದ ಹಿನ್ನೆಲೆ, ಸಿಎಂ ಸಿದ್ದರಾಮಯ್ಯ ಜೊತೆ ಕಾನೂನು ಸಚಿವ ಹೆಚ್​.ಕೆ ಪಾಟೀಲ್​ ಮಾತುಕತೆ ನಡೆಸಿದ್ದಾರೆ. ಫೋನ್​ನಲ್ಲಿ ಸಿಎಂಗೆ ಮಾಹಿತಿ ನೀಡಿದ ಕಾನೂನು ಸಚಿವ ಹೆಚ್​​.ಕೆ ಪಾಟೀಲ್​​, ಸಾಂವಿಧಾನಿಕ ಬಿಕ್ಕಟ್ಟಿನ ಬಗ್ಗೆ ಚರ್ಚೆ ನಡೆಸಿದ್ದಾರೆ. ಸರ್ಕಾರದ ಭಾಷಣವನ್ನ ಯಥಾವತ್ ಕಳುಹಿಸಿ ಎಂದು ಸಿಎಂ ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಎಜಿ ಹಾಗೂ ತಜ್ಞರ ಜೊತೆ ಚರ್ಚಿಸಿ ಕಾನೂನಾತ್ಮಕ ಹೋರಾಟಕ್ಕೆ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.