Gruha Lakshmi : ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಗೆದ್ದ ಬಳಿಕ 5ಗ್ಯಾರಂಟಿ ಯೋಜನೆಗಳಲ್ಲಿ ಒಂದೊಂದೇ ಯೋಜನೆಗಳ ಜಾರಿಗೆ ಕ್ರಮ ಕೈಗೊಳ್ಳುತ್ತಿದೆ. ಈಗಾಗಲೇ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ (Gruha Lakshmi) ಯೋಜನೆಯ ಅರ್ಜಿ ಸಲ್ಲಿಕೆ ಕ್ಷಣಗಣನೆ ಆರಂಭವಾಗಿದ್ದು, ಗ್ರಾಹಕರು ನೋಂದಣಿ ಮಾಡಿಕೊಳ್ಳಲು ತಾ ಮುಂದು ತಾ ಮುಂದು ಎಂದು ಕಾಯುತ್ತಿದ್ದಾರೆ. ಆದರೆ ಸದ್ಯ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಆ್ಯಪ್ ರಚಿಸಲಾಗಿದ್ದು, ಇದರ ಮೂಲಕ ಚಿಂತೆ ಇಲ್ಲದೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಲ್ಕರ್ ಹೇಳಿದ್ದಾರೆ.
ಹೌದು, ಜೂನ್ 27ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಮುಖ್ಯಮಂತ್ರಿಗಳಿಗೆ ಆ್ಯಪ್ ತೋರಿಸಿ ವಿವರಿಸುತ್ತೇವೆ. ನಂತರ ಅರ್ಜಿ ಸಲ್ಲಿಕೆಗೆ ಬಿಡುಗಡೆ ಮಾಡಲಾಗುವುದು. ಮತ್ತು ಆಗಸ್ಟ್ 17ರ ನಂತರ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಮುಖ್ಯವಾಗಿ, ಜೂನ್ 27 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, ಆಗಸ್ಟ್ 17 ಅಥವಾ 18 ರಂದು ಮನೆ ಒಡತಿಯರ ಖಾತೆಗೆ 2 ಸಾವಿರ ರೂ ಹಣ ಜಮಾ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಲ್ಕರ್ ಹೇಳಿದ್ದಾರೆ.
ಮಹಿಳೆಯರು ಗೃಹಲಕ್ಷ್ಮೀ ಯೋಜನೆಗೆ ಸರ್ಕಾರದ ಸೇವಾಸಿಂಧು ಪೋರ್ಟಲ್ನಲ್ಲಿ ಆನೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಥವಾ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಭೌತಿಕವಾಗಿ ಅರ್ಜಿ ಸಲ್ಲಿಸಬಹುದು.
ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು :
ರೇಷನ್ ಕಾರ್ಡ್, ಬ್ಯಾಂಕ್ ಪಾಸ್ಟುಕ್, ಆಧಾರ್ ಕಾರ್ಡ್, ಯಾವುದಾದರೂ ಗುರುತಿನ ಚೀಟಿ ಮತ್ತು ಎಪಿಎಲ್, ಬಿಪಿಎಲ್, ಅಂತ್ಯೋದಯ ಕಾರ್ಡ್ ಯಾವುದಾದರೂ ಒಂದು ಇರಲೇಬೇಕು.
ಮುಖ್ಯವಾಗಿ ಗೃಹಲಕ್ಷ್ಮೀ ಯೋಜನೆಯಡಿ 2,000 ರೂ. ಪಡೆಯಲು ಮನೆಯೊಡತಿಯ ಬ್ಯಾಂಕ್ ಹಾಗೂ ಆಧಾರ್ ಕಾರ್ಡ್ ಅನ್ನು ಜೋಡಣೆ ಮಾಡಿರಲೇಬೇಕು. ಒಂದು ವೇಳೆ ಯೋಜನೆಯ ಲಾಭ ಪಡೆಯಲು ತಪ್ಪು ಮಾಹಿತಿ ನೀಡಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ.
ಇನ್ನು ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇರುವುದಿಲ್ಲ ಮತ್ತು ಶುಲ್ಕವೂ ಇರುವುದಿಲ್ಲ ಎಂದು ಕೂಡ ಮಾಹಿತಿ ನೀಡಲಾಗಿದೆ.
