HSRP Number Plate: ವಾಹನ ಮಾಲೀಕರಿಗೆ ಬಹು ಮುಖ್ಯ ಮಾಹಿತಿ ಇಲ್ಲಿದೆ ನೋಡಿ! 2019ರ ಏಪ್ರಿಲ್ ತಿಂಗಳಿಗಿಂತಲೂ ಮೊದಲು ನೋಂದಾಯಿಸಲಾಗಿರುವ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ಗಳ(HSRP Number Plate)ಅಳವಡಿಕೆಯ ಗಡುವು ನವೆಂಬರ್ 17ರಂದು ಮುಗಿಯಲಿದೆ.
ಸಾರಿಗೆ ಇಲಾಖೆಯಿಂದ ಗುರುತಿಸಿದ ಮೂಲ ವಾಹನ ಉತ್ಪಾದನಕ ಕಂಪನಿಗಳು ಹಾಗೂ ಅಧಿಕೃತ ವಾಹನ ಡೀಲರ್ಗಳು ಮಾತ್ರವೇ ಹೆಚ್.ಎಸ್.ಆರ್.ಪಿ (HSRP) ನಂಬರ್ ಪ್ಲೇಟ್ ಅಳವಡಿಸಲು ಮಾನ್ಯತೆ ಪಡೆದಿರುತ್ತಾರೆ. ವಾಹನ ಮಾಲೀಕರು ವೈಬ್ಸೈಟ್ ಮೂಲಕವೇ ನೊಂದಣಿ ಮಾಡಿಕೊಂಡು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ವಾಹನಗಳಿಗೆ ಅಳವಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
‘HSRP’ ನಂಬರ್ ಪ್ಲೇಟ್ ಅಳವಡಿಸಲು ನ.17 ಕೊನೆಯ ದಿನವಾಗಿದ್ದು, 01 ಏಪ್ರಿಲ್ 2019ರ ಬಳಿಕ ನೊಂದಣಿ ಮಾಡಿಕೊಂಡ ಎಲ್ಲಾ ವಿಧದ ವಾಹನಗಳಿಗೆ ನವೆಂಬರ್ 17ರ ಒಳಗಾಗಿ ಹೆಚ್‌ಎಸ್‌ಆರ್ಪಿ (High Security Registration Plate)ನಂಬರ್ ಪ್ಲೇಟ್ ಅಳವಡಿಸುವುದು ಕಡ್ಡಾಯವಾಗಿದೆ.
ವಾಹನ ಮಾಲೀಕರು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಪಡೆಯಲು ಕರ್ನಾಟಕ ಸಾರಿಗೆ ಇಲಾಖೆ ವೆಬ್ಸೈಟ್ https://transport.karnataka.gov.in ಇಲ್ಲವೇ www.siam.in ಭೇಟಿ ನೀಡಬೇಕು.
ವೆಬ್ಸೈಟ್ನಲ್ಲಿ ವಾಹನದ ಉತ್ಪಾದಕ ಕಂಪನಿ ಮತ್ತು ಇತರೆ ಮೂಲಭೂತ ಮಾಹಿತಿಗಳನ್ನು ಭರ್ತಿ ಮಾಡಬೇಕು. ಹತ್ತಿರ ಡೀಲರ್ ಸ್ಥಳವನ್ನು ನಿಗದಿ ಮಾಡಿ ಆನ್ಲೈನ್ ಮೂಲಕವೇ ಹಣ ಪಾವತಿ ಮಾಡಬೇಕಾಗುತ್ತದೆ. ಇದರ ಜೊತೆಗೆ ವಾಹನ ಮಾಲೀಕರ ಮೊಬೈಲ್ ನಂಬರ್ಗೆ ಬರುವ ಒಟಿಪಿ ಮಾಹಿತಿ ನಮೂದಿಸಿ, ದಿನಾಂಕ ಹಾಗೂ ಸಮಯ ನಿಗದಿ ಮಾಡಿಕೊಂಡು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬಹುದಾಗಿದೆ.
ಇದನ್ನು ಓದಿ: Pension Scheme: ಇದೊಂದು ಯೋಜನೆಯಲ್ಲಿ ಹೂಡಿಕೆ ಮಾಡಿದ್ರೆ ಸಾಕು, ಗಂಡ-ಹೆಂಡತಿ ಇಬ್ರಿಗೂ ತಿಂಗಳ ಸಂಬಳದಂತೆ ಬರುತ್ತೆ ಹಣ !!
