K.S.Eshwarappa: ಸುಳ್ಯ : ಬಿಜೆಪಿ ಬಹುಮತ ಬರುವ ವಿಶ್ವಾಸ ಇದೆ. ಸಮೀಕ್ಷೆ ಮೇಲೆ ನಂಬಿಕೆ ಇಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (K.S.Eshwarappa) ಹೇಳಿದರು. ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮೇ.11ರ ಗುರುವಾರ ಭೇಟಿ ನೀಡಿ ಮಾಧ್ಯಮದವರ ಜೊತೆ ಮಾತನಾಡಿದರು
ಈ ಹಿಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ 26, ಬಿಜೆಪಿಗೆ 1 ಸ್ಥಾನ ಎಂದು ಸಮೀಕ್ಷೆ ಹೇಳಿತ್ತು.ಆದರೆ ಫಲಿತಾಂಶ ಬಂದ ಬಳಿಕ ಬಿಜೆಪಿ 25, ಕಾಂಗ್ರೆಸ್ 1 ಸ್ಥಾನ ಪಡೆದಿತ್ತು.ಈ ಸಮೀಕ್ಷೆಗಳ ಬಗ್ಗೆ ನಂಬಿಕೆ ಇಲ್ಲ. ಜನರ ಭಾವನೆ ಬಗ್ಗೆ ನಂಬಿಕೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮೇ.11ರ ಗುರುವಾರ ಭೇಟಿ ನೀಡಿ ಮಾಧ್ಯಮದವರ ಜೊತೆ ಮಾತನಾಡಿ, ಬಿಜೆಪಿ ಬಹುಮತ ಪಡೆದು ಸರಕಾರ ನಡೆಸಲಿದೆ ಎಂದರು. ಬಿಜೆಪಿ ಸರಕಾರ ಬಂದ ಮೇಲೆ ನಿಮಗೆ ಯಾವ ಸ್ಥಾನ ಸಿಗಬಹುದು ಎಂಬ ಪ್ರಶ್ನೆಗೆ ಇದರ ಬಗ್ಗೆ ಬಿಜೆಪಿ ಕೇಂದ್ರ ನಾಯಕರ ನಿರ್ಧಾರ ಎಂದ ಅವರು ಕ್ಷೇತ್ರದಲ್ಲಿ ಆಶ್ಲೇಷ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಅವರ ಮಗ ಕಾಂತೇಶ್ ಮತ್ತು ಸೊಸೆ ಆದಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಉರುಳು ಸೇವೆ ನೆರವೇರಿಸಿದರು.
ಇದನ್ನು ಓದಿ: Vote: ಯಾರ ಹೆಂಡ್ತಿ ಪತಿವ್ರತೆನೋ ಅವರೆಲ್ಲ ಬಿಜೆಪಿಗೆ ವೋಟ್ ಹಾಕಿ’ ಅಂತ ಸ್ಟೇಟಸ್ ಹಾಕಿದ ಯುವಕ !
