Home » Karnataka Budget 2024​​: ಮದ್ಯ ಪ್ರಿಯರಿಗೆ ರಾಜ್ಯ ಸರಕಾರದಿಂದ ಶಾಕ್‌, ಬೆಲೆ ಏರಿಸಲು ರಾಜ್ಯ ಸರ್ಕಾರ ನಿರ್ಧಾರ

Karnataka Budget 2024​​: ಮದ್ಯ ಪ್ರಿಯರಿಗೆ ರಾಜ್ಯ ಸರಕಾರದಿಂದ ಶಾಕ್‌, ಬೆಲೆ ಏರಿಸಲು ರಾಜ್ಯ ಸರ್ಕಾರ ನಿರ್ಧಾರ

0 comments
Karnataka Budget 2024

Karnataka Budget 2024: ಮುಖ್ಯ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ 2024-25 ನೇ ಸಾಲಿನ ಬಜೆಟ್‌ ಮಂಡನೆ ಮಾಡುತ್ತಿದ್ದಾರೆ. ಈ ಬಾರಿ ಬಜೆಟ್‌ ಮಂಡನೆಯಲ್ಲಿ ಮದ್ಯಪ್ರಿಯರಿಗೆ ಶಾಕ್‌ ನೀಡಿದ್ದು, ಮದ್ಯದ ದರ ಹೆಚ್ಚಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಿದ್ದರಾಮಯ್ಯ ಅವರು ಮದ್ಯದ ಘೋಷಿತ ಸ್ಲಾಬ್‌ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IML, ಬಿಯರ್‌ ಸ್ಲಾಬ್‌ ಪರಿಷ್ಕರಣೆ ಮಾಡಲಾಗುವುದು ಎಂದು ಹೇಳಿದ್ದಾರೆ. ಹಾಗೆನೇ ಅಬಕಾರಿ ಇಲಾಖೆಯ ಎಲ್ಲಾ ಸೇವೆ ಡಿಜಿಟಲೀಕರಣಗೊಳಿಸಲಾಗುತ್ತದೆ.

ಇದನ್ನೂ: Bengaluru: ಜೈಲಿನಿಂದಲೇ ಯುವತಿಗೆ ಬಂತು ಬೆತ್ತಲೆ ಫೋಟೋ, ರೌಡಿ ಶೀಟರ್ ನಿಂದ ಬ್ಲಾಕ್ಮೇಲ್ !!

2023-24ನೇ ಸಾಲಿನ ಜನವರಿ ತಿಂಗಳ ಅಂತ್ಯದವರೆಗೆ, ಅಬಕಾರಿ ತೆರಿಗೆಯಿಂದ 28,181 ಕೋಟಿ ರೂ.ಗಳು ಸ್ವೀಕೃತವಾಗಿದೆ. 2024-25ನೇ ಸಾಲಿಗೆ 38,525 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಹೇಳಿದರು. ಹೊಸ ನಿಯಮಗಳು ಈ ತಿಂಗಳ ಕೊನೆಯಲ್ಲಿ ಅಥವಾ ಫೆಬ್ರವರಿ ಆರಂಭದಲ್ಲಿ ಅಂತಿಮಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದ್ದವು.

You may also like

Leave a Comment