C T Ravi: ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿಗಳು ನಡೆಯುತ್ತಿದ್ದು, ಚುನಾವಣಾ ಪೂರ್ವ ಸಮೀಕ್ಷೆಗಳೂ ನಡೆಯುತ್ತಿವೆ. ಜೊತೆಗೆ ಪಕ್ಷಗಳು ಹಾಗೂ ಪ್ರತಿಪಕ್ಷಗಳು ಕೂಡ ತಾವೇ ಚುನಾವಣಾ ಫಲಿತಾಂಶದ ಭವಿಷ್ಯ ನುಡಿಯುತ್ತಿದ್ದಾರೆ. ಅಂತೆಯೇ ಇದೀಗ ಬಿಜೆಪಿ ನಾಯಕ ಸಿಟಿ ರವಿ(C T Ravi) ಅವರು ಕಾಂಗ್ರೆಸ್ ಬಗ್ಗೆ ಭವಿಷ್ಯ ನುಡಿದಿದ್ದು, ಇಡೀ ದೇಶಾದ್ಯಂತ ಕಾಂಗ್ರೆಸ್ ಬರೀ 20 ಸೀಟು ಗೆಲ್ಲುತ್ತದೆ ಎಂದಿದ್ದಾರೆ.
ಇದನ್ನೂ ಓದಿ: Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ

ಹೌದು, ಬಳ್ಳಾರಿ(Ballary) ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ರಾಜ್ಯದಲ್ಲಿ ಅಲ್ಲ ಇಡೀ ದೇಶದಲ್ಲಿ ಕಾಂಗ್ರೆಸ್ (Congress) 20 ಸ್ಥಾನ ಗೆಲ್ಲುವುದಿಲ್ಲ ಎಂದು ಬಿಜೆಪಿಯ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಮಾಜಿ ಸಿ.ಟಿ.ರವಿ (CT Ravi) ಹೇಳಿದರು.
ಅಂದಹಾಗೆ ರಾಜ್ಯದಲ್ಲಿ 20 ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲೋದಾಗಿ ಹೇಳಿದ್ದ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ಈ ರೀತಿ ಪ್ರತಿಕ್ರಿಯಿಸಿದ ಅವರು ಕರ್ನಾಟಕ, ತಮಿಳುನಾಡು ಮತ್ತು ಕೇರಳದಲ್ಲಿ ಕಳೆದ ಬಾರಿ ಬೋನಸ್ ಅಗಿ ಒಂದೆರಡು ಕ್ಷೇತ್ರ ಗೆದ್ದಿದ್ದರು. ಈಗ ಅದು ಕೂಡ ಗೆಲ್ಲೋದಿಲ್ಲ, ಆರಂಭದಲ್ಲಿ ಸೌಂಡ್ ಮಾಡಿದ ಇಂಡಿಯಾ ಒಕ್ಕೂಟ ಇದೀಗ ಟುಸ್ ಆಗಿದೆ. ನಾವಂತೂ 400ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಬರುತ್ತೇವೆ ಅಂದರು.
