DK Shivakumar: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಅವರು ಮೇ.2ರಂದು (ಇಂದು) ಜಕ್ಕೂರು ಹೆಲಿಪ್ಯಾಡ್‌ನಿಂದ ಕೋಲಾರದ ಮುಳಬಾಗಿಲಿಗೆ ಹೆಲಿಕಾಪ್ಟರ್ ನಲ್ಲಿ ತೆರಳುತ್ತಿದ್ದ ವೇಳೆ ರಣಹದ್ದು ಹೆಲಿಕಾಪ್ಟರ್ ಗೆ ಡಿಕ್ಕಿ ಹೊಡೆದಿದೆ.
ಡಿಕೆ ಶಿವಕುಮಾರ್ ಪ್ರಚಾರದ (Karnataka election 2023) ಹಿನ್ನೆಲೆ ಹೆಚ್ಎಎಲ್ ಏರ್ಪೋರ್ಟ್ ನಿಂದ ಕೋಲಾರ ಮುಳಬಾಗಿಲಿಗೆ ಹೆಲಿಕಾಪ್ಟರ್ ಮೂಲಕ ಪ್ರಯಾಣಿಸಿದ್ದರು. ಆದರೆ ಟೇಕಾಫ್ ವೇಳೆ ಅವಘಡವೊಂದು ಸಂಭವಿಸಿದೆ. ಹೆಲಿಕಾಪ್ಟರ್ ಗೆ ರಣಹದ್ದು ರಭಸದಿ ಡಿಕ್ಕಿ ಹೊಡೆದಿದೆ. ಪರಿಣಾಮ ಮುಂಭಾಗದ ಗ್ಲಾಸ್ ಪುಡಿ ಪುಡಿಯಾಗಿದ್ದು, ತಕ್ಷಣವೇ ಪೈಲಟ್ ಹೆಲಿಕಾಪ್ಟರ್ (Helicopter) ಅನ್ನು ತುರ್ತು ಭೂ ಸ್ಪರ್ಶ ಮಾಡಿದ್ದಾರೆ. ಸದ್ಯ ಡಿಕೆಶಿ ಸುರಕ್ಷಿತವಾಗಿದ್ದು, ಹೆಲಿಕಾಪ್ಟರ್ ಪ್ರಯಾಣ ರದ್ದು ಮಾಡಿ ಪ್ರಚಾರಕ್ಕೆ ರಸ್ತೆ ಮೂಲಕ ಪ್ರಯಾಣ ಬೆಳೆಸಿದರು.
ಇದನ್ನೂ ಓದಿ: ವಿಶ್ವದಲ್ಲಿ ಅತಿ ಹೆಚ್ಚು ಸಂಬಳ ಇರುವ ದೇಶಗಳ ಪಟ್ಟಿಯಲ್ಲಿ ಭಾರತಕ್ಕೆ ಎಷ್ಟನೇ ಸ್ಥಾನ?
