Home » ದ.ಕ.,ಉಡುಪಿ 4 ಅಲ್ಲ ,10 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ-ಡಿ.ಕೆ.ಶಿವ ಕುಮಾರ್

ದ.ಕ.,ಉಡುಪಿ 4 ಅಲ್ಲ ,10 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ-ಡಿ.ಕೆ.ಶಿವ ಕುಮಾರ್

by Praveen Chennavara
4 comments

ಬೆಂಗಳೂರು:ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 10 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ಅವರು ಪತ್ರಕರ್ತರ ಜತೆ ಮಾತನಾಡಿ,ಬಿಜೆಪಿಯ ಆಂತರಿಕ ಸಮೀಕ್ಷೆಯಲ್ಲಿ ಕರಾವಳಿಯಲ್ಲಿ ಕಾಂಗ್ರೆಸ್‌ 4 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂಬ ವರದಿ ಇದೆ ಎಂದು ಹೇಳಲಾಗುತ್ತಿದೆ. ಅದು ತಪ್ಪು, ನಮ್ಮ ವರದಿಯಲ್ಲಿ 10 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಬಂದಿದೆ ಎಂದರು.

ಕರಾವಳಿ ಭಾಗದಲ್ಲಿ ಕಾಂಗ್ರೆಸ್‌ ತನ್ನದೇ ಆದ ಕಾರ್ಯಕ್ರಮ ರೂಪಿಸಿ ಪಕ್ಷ ಸಂಘಟನೆ ಮಾಡಲಾಗುತ್ತಿದೆ. ಈ ಭಾಗದ ಹಿಂದುಳಿದ ವರ್ಗಗಳಾದ ಮೊಗವೀರರು, ಬಂಟರು, ಬಿಲ್ಲವರು, ಕುಲಾಲ ಸಮುದಾಯಗಳಿಗೆ ಪ್ರತ್ಯೇಕ ನಿಗಮ ಮಾಡಿ, ಈ ಭಾಗಕ್ಕೆ ಪ್ರತ್ಯೇಕ ಪ್ರಣಾಳಿಕೆ ಪ್ರಕಟ ಮಾಡಿ, ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಿ ಉದ್ಯೋಗ ಸೃಷ್ಟಿಗೆ ಉತ್ತೇಜನ ನೀಡಲಾಗುವುದು ಎಂದರು.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಶುಕ್ರವಾರವೇ ಪುತ್ತೂರು ಪ್ರವಾಸ ಮಾಡಬೇಕಿತ್ತು. ಆದರೆ ಅಲ್ಲಿನ ರೋಡ್‌ ಶೋ ಕಾನೂನು ಸುವ್ಯವಸ್ಥೆ ಕಾರಣದಿಂದ ರದ್ದು ಮಾಡಲಾಗಿದೆ ಎಂದು ಬಿಜೆಪಿ ಅಧ್ಯಕ್ಷರು ಟ್ವೀಟ್‌ ಮಾಡಿದ್ದಾರೆ. ರಾಜ್ಯದಲ್ಲಿ ಕೇಂದ್ರ ಗೃಹ ಸಚಿವರಿಗೆ ಕಾನೂನು ರಕ್ಷಣೆ ಇಲ್ಲ ಎಂದರೆ ಜನ ಸಾಮಾನ್ಯರ ಪರಿಸ್ಥಿತಿ ಏನಾಗಬೇಕು? ರಾಜ್ಯಕ್ಕೆ ಇದಕ್ಕಿಂತ ದೊಡ್ಡ ಅವಮಾನ ಬೇರೆ ಏನು ಬೇಕು ಎಂದು ಪ್ರಶ್ನಿಸಿದರು.

ಈ ಭಾಗದಲ್ಲಿ ಹತ್ಯೆ ನಡೆದಾಗ ಬಿಜೆಪಿ ಕಾರ್ಯಕರ್ತರು ಮಂತ್ರಿ ಹಾಗೂ ಬಿಜೆಪಿ ಅಧ್ಯಕ್ಷರ ವಿರುದ್ಧ ಹೇಗೆ ಪ್ರತಿಭಟನೆ ನಡೆಸಿದರು ಎಂದು ನಿಮಗೆ ಗೊತ್ತೇ ಇದೆ. ಹಿಂದುತ್ವದ ಹೆಸರಿನ ಹೋರಾಟದಲ್ಲಿ ಬಿಜೆಪಿ ನಾಯಕರ ಮಕ್ಕಳು ಬಲಿಯಾಗಿಲ್ಲ. ಬಡವರ ಮಕ್ಕಳನ್ನು ಬಲಿ ಪಡೆಯುತ್ತಿದ್ದಾರೆ. ಈ ಬಗ್ಗೆ ಜನರಿಗೆ ಉತ್ತರ ನೀಡುವ ಜವಾಬ್ದಾರಿಯನ್ನು ಮುಖ್ಯಮಂತ್ರಿಗಳಿಗೆ ಬಿಡುತ್ತೇನೆ ಎಂದು ತಿಳಿಸಿದರು.

You may also like

Leave a Comment