Home Karnataka State Politics Updates Karnataka Gvt : ನೇಮಕಾತಿ ವಯೋಮಿತಿ 5 ವರ್ಷ ಸಡಿಲ?

Karnataka Gvt : ನೇಮಕಾತಿ ವಯೋಮಿತಿ 5 ವರ್ಷ ಸಡಿಲ?

Karnataka Gvt : ರಾಜ್ಯ ಸರ್ಕಾರವು ಉದ್ಯೋಗಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಒಂದನ್ನು ನೀಡಲು ಮುಂದಾಗಿದ್ದು, ಮುಂದೆ ಹೊರಡಿಸುವ ನೇಮಕಾತಿ ಅಧಿಸೂಚನೆಗೆ ಎಲ್ಲಾ ಸಮುದಾಯಗಳಿಗೂ ವಯೋಮಿತಿಯನ್ನು 5 ವರ್ಷ ನಡಿಲ ಮಾಡಲು ತೀರ್ಮಾನಿಸಿದೆ.

ಹೌದು, ರಾಜ್ಯದಲ್ಲಿ ಒಳ ಮೀಸಲಾತಿ ವಿವಾದ ಮತ್ತಿತರ ಕಾರಣಗಳಿಂದ ಕಳೆದ ಎರಡು ವರ್ಷಗಳಿಂದ ನೇಮಕಾತಿ ವಿಳಂಬ ಆಗಿದೆ. ಈ ಹಿನ್ನೆಲೆಯಲ್ಲಿ ಹೋರಾಟಕ್ಕಿಳಿದಿರುವ ಉದ್ಯೋಗಾಕಾಂಕ್ಷಿಗಳು ವಯೋಮಿತಿಯನ್ನು 5 ವರ್ಷ ಸಡಿಲಿಕೆ ಮಾಡಬೇಕು ಎಂದು ಒತ್ತಾಯಿಸಿದ್ದರು. ಈ ಬೆನ್ನಲ್ಲೇ 2027ರ ಡಿ.31ರವರೆಗೆ ಹೊರಡಿಸುವ ರಾಜ್ಯದ ಎಲ್ಲಾ ರೀತಿಯ ಸಿವಿಲ್‌ ಹುದ್ದೆಗಳ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು 5 ವರ್ಷ ಸಡಿಲಗೊಳಿಸಲು ಸರ್ಕಾರ ತೀರ್ಮಾನಿಸಿದೆ. ಗುರುವಾರ ನಡೆಯಲಿರುವ ಸಂಪುಟ ಸಭೆಯಲ್ಲಿ ಅಧಿಕೃತ ನಿರ್ಣಯ ಕೈಗೊಳ್ಳುವ ಸಾಧ್ಯತೆಯಿದೆ.

ಸಚಿವ ಸಂಪುಟ ಸಭೆಯಲ್ಲಿ ಐದು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿದರೆ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ವರ್ಗಗಳ ಲಕ್ಷಾಂತರ ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಡಲಿದೆ. ಈ ನಿರ್ಧಾರದಿಂದಾಗಿ, ವಯಸ್ಸಿನ ಕಾರಣದಿಂದ ನೇಮಕಾತಿ ಪ್ರಕ್ರಿಯೆಯಿಂದ ಹೊರಗುಳಿಯುವ ಆತಂಕದಲ್ಲಿದ್ದ ಲಕ್ಷಾಂತರ ಅಭ್ಯರ್ಥಿಗಳು ನಿರಾಳರಾಗಲಿದ್ದಾರೆ ಎಂದು ತಿಳಿದುಬಂದಿದೆ.